ADVERTISEMENT

ಖಾಸಗಿ ಕಾಲೇಜುಗಳಲ್ಲಿ ಅಧಿಕ ಶುಲ್ಕ ಸಲ್ಲ: ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2022, 20:55 IST
Last Updated 15 ನವೆಂಬರ್ 2022, 20:55 IST

ಬೆಂಗಳೂರು:‘ಖಾಸಗಿ ಕಾಲೇಜುಗಳು ಉನ್ನತ ಶಿಕ್ಷಣದಲ್ಲಿ ಶಾಸನಬದ್ಧ ಅಧಿಕಾರಿಗಳು ನಿಗದಿಪಡಿಸಿದ ಶುಲ್ಕವನ್ನಷ್ಟೇ ಪಡೆಯಬೇಕು. ಅಧಿಕ ಶುಲ್ಕ ಸಂಗ್ರಹಿಸದಂತೆ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ನಿರ್ದೇಶನ ನೀಡಬೇಕು’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.

‘ಹೆಚ್ಚುವರಿ ಶುಲ್ಕ ಸಂಗ್ರಹ ಮಾಡದಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಜಿ.ಹರೀಶ್ ಮತ್ತಿತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ, ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾ ಅವರಿದ್ದ ವಿಭಾಗೀಯ ನ್ಯಾಯಪೀಠ ಆದೇಶಿಸಿದೆ.

‘ಶಿಕ್ಷಣ ಇಂದು ಮಾರುಕಟ್ಟೆಯಾಗಿ ಪರಿಣಮಿಸಿದೆ. ಹಣ ಮಾಡುವುದಕ್ಕಾಗಿಯೇ ಶಿಕ್ಷಣ ಸಂಸ್ಥೆಗಳನ್ನು ನಡೆಸಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕಿದೆ. ರಾಜ್ಯ ಸರ್ಕಾರಕ್ಕೆ ನಿಜವಾಗಿಯೂವಿದ್ಯಾರ್ಥಿಗಳ ಹಿತ ರಕ್ಷಣೆಯ ಕಾಳಜಿ ಇದ್ದರೆ ಅಧಿಕ ಶುಲ್ಕ ಸಂಗ್ರಹಿಸದಂತೆ ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಅರ್ಜಿ ವಿಲೇವಾರಿ ಮಾಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.