ADVERTISEMENT

ಆರೋಗ್ಯ ಕವಚ ಸಿಬ್ಬಂದಿ ಮಾಹಿತಿ ಒದಗಿಸಲು ಹೈಕೋರ್ಟ್‌ ಆದೇಶ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2024, 20:36 IST
Last Updated 9 ಆಗಸ್ಟ್ 2024, 20:36 IST
<div class="paragraphs"><p> ಹೈಕೋರ್ಟ್‌ </p></div>

ಹೈಕೋರ್ಟ್‌

   

ಬೆಂಗಳೂರು: ‘ಆರೋಗ್ಯ ಕವಚ-108 ಆಂಬುಲೆನ್ಸ್‌ ವಾಹನಗಳ ಸಿಬ್ಬಂದಿಗೆ ವೇತನ ನೀಡುವ ವ್ಯವಸ್ಥೆ ಏನು? ಅದಕ್ಕಾಗಿ ಸರ್ಕಾರ ಯಾವ ಯಾವ ಸಮಯದಲ್ಲಿ ಆದೇಶಗಳನ್ನು ಹೊರಡಿಸಿದೆ? ಸರ್ಕಾರ ಮತ್ತು ಖಾಸಗಿ ಸೇವಾ ಸಂಸ್ಥೆ ನಡುವೆ ಆಗಿರುವ ಒಡಂಬಂಡಿಕೆಗಳೇನು ಎಂಬ ಬಗ್ಗೆ ಸಮಗ್ರ ಮಾಹಿತಿ ಒದಗಿಸಿ’ ಎಂದು ಹೈಕೋರ್ಟ್‌, ರಾಜ್ಯ ಸರ್ಕಾರ ಹಾಗೂ ಜಿವಿಕೆ-ಇಎಂಆರ್‌ಐ ಸಂಸ್ಥೆಗೆ ನಿರ್ದೇಶಿಸಿದೆ.

ಈ ಸಂಬಂಧ ಆರೋಗ್ಯ ಕವಚ-108 ನೌಕರರ ಪರವಾಗಿ ‘ಅಖಿಲ ಕರ್ನಾಟಕ 108 ಆಂಬುಲೆನ್ಸ್‌ ನೌಕರರ ಹಿತರಕ್ಷಣಾ ಸಂಘ‘, ‘ಕರ್ನಾಟಕ ರಾಜ್ಯ ಆರೋಗ್ಯ ಕವಚ (108) ಆಂಬುಲೆನ್ಸ್‌ ನೌಕರರ ಸಂಘ‘, ‘ಸುವರ್ಣ ಕರ್ನಾಟಕ ಆರೋಗ್ಯ ಕವಚ (108) ಆಂಬುಲೆನ್ಸ್‌ ನೌಕರರ ಸಂಘ‘ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ADVERTISEMENT

ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ಎಲ್.ಮುರಳೀಧರ ಪೇಶ್ವೆ, ‘ಸಿಬ್ಬಂದಿಗೆ ಹೆಚ್ಚುವರಿ ವೇತನ ಕಡಿತಗೊಳಿಸಲಾಗುತ್ತಿದೆ. ದಿನದಲ್ಲಿ 12 ತಾಸು ಕೆಲಸ ಮಾಡುತ್ತಿರುವ ಮೂರು ಸಾವಿರಕ್ಕೂ ಅಧಿಕ ಸಿಬ್ಬಂದಿಗೆ ತಿಂಗಳಿಗೆ ಕೇವಲ ₹14ರಿಂದ ₹15 ಸಾವಿರ ವೇತನ ದೊರೆಯುತ್ತಿದೆ. ಸಾಲದು ಎಂಬಂತೆ ಎಸ್ಮಾ ಕಾಯ್ದೆ ಜಾರಿ ಮಾಡಲಾಗಿದೆ. ಈ ಅನ್ಯಾಯ ಸರಿಪಡಿಸಿ, ಅವರಿಗೆ ನ್ಯಾಯಯುತ ವೇತನ ಹಾಗೂ ಇತರೆ ಸೌಲಭ್ಯಗಳು ಸಿಗುವಂತೆ ಮಾಡಲು ಕ್ರಮಕ್ಕೆ ನಿರ್ದೇಶಿಸಬೇಕು’ ಎಂದು ಕೋರಿದರು. ವಾದ ಆಲಿಸಿ ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಇದೇ 22ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.