ಬೆಂಗಳೂರು: ‘ಸಿದ್ದರಾಮಯ್ಯ ಯಾವಾಗ ಅಧಿಕಾರಕ್ಕೆ ಬರುತ್ತಾರೋ ಆಗೆಲ್ಲಾ ಹಿಂದೂಗಳು ಬದುಕುವುದು ಕಷ್ಟ’ ಎಂಬ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಕೋಮು ದ್ವೇಷ ಹರಡಿದ ಆರೋಪದಡಿ ‘ಯುವ ಬ್ರಿಗೇಡ್’ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿದೆ.
ಪ್ರಕರಣ ರದ್ದು ಕೋರಿ ಚಕ್ರವರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಧಾರವಾಡದ ಏಕಸದಸ್ಯ ನ್ಯಾಯಪೀಠದ ನ್ಯಾಯಮೂರ್ತಿ ಶಿವಶಂಕರ ಅಮರಣ್ಣವರ ಈ ಕುರಿತಂತೆ ಆದೇಶಿಸಿದ್ದಾರೆ.
ಪ್ರಕರಣವೇನು?: ಕಾರವಾರ ತಾಲ್ಲೂಕಿನ ಕಡವಾಡ ಭೋವಿವಾಡದಲ್ಲಿರುವ ಆದಿಮಾಯಿ ದೇವಸ್ಥಾನಕ್ಕೆ 2023ರ ಅಕ್ಟೋಬರ್ 3ರಂದು ಭೇಟಿ ನೀಡಿದ್ದ ಚಕ್ರವರ್ತಿ ಅಲ್ಲಿ ಮಾಧ್ಯಮ ಗೋಷ್ಠಿ ನಡೆಸಿದ್ದರು.
‘ಗೋಷ್ಠಿಯಲ್ಲಿ ಮಾತನಾಡುವಾಗ ಹಿಂದೂ ಹಾಗೂ ಮುಸ್ಲಿಂ ಧರ್ಮಗಳ ಮಧ್ಯೆ ಕೋಮು ದ್ವೇಷ ಹರಡಲು ಪ್ರಯತ್ನಿಸಿದ್ದಾರೆ’ ಎಂಬ ಆರೋಪದಡಿ ಕಾರವಾರ ಗ್ರಾಮಾಂತರ ಠಾಣಾ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.