ADVERTISEMENT

ಹಿಜಾಬ್‌ ವಿವಾದದ ಸೃಷ್ಟಿಕರ್ತರ ವಿವರ ಶೀಘ್ರ ಬಯಲು: ಬಿ.ಸಿ.ನಾಗೇಶ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಫೆಬ್ರುವರಿ 2022, 19:39 IST
Last Updated 13 ಫೆಬ್ರುವರಿ 2022, 19:39 IST
ಬಿ.ಸಿ.ನಾಗೇಶ್
ಬಿ.ಸಿ.ನಾಗೇಶ್   

ಅರಸೀಕೆರೆ (ಹಾಸನ): ‘ಹಿಜಾಬ್ ವಿವಾದದ ಸೃಷ್ಟಿಯ ಹಿಂದೆ ಯಾರಿದ್ದಾರೆ ಎಂಬ ಸತ್ಯ ಸದ್ಯದಲ್ಲೇ ಬಯಲಾಗಲಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸೋಮವಾರ ನಡೆಯಲಿರುವ ಮುಖ್ಯಮಂತ್ರಿ ನೇತೃತ್ವದ ಸಭೆ ಬಳಿಕ ಪದವಿ ಕಾಲೇಜು ಆರಂಭದ ಬಗ್ಗೆ ನಿರ್ಧರಿಸಲಾಗುವುದು’ ಎಂದರು.

‘ಹಿಜಾಬ್ ವಿವಾದ ಸೃಷ್ಟಿಯ ಕುರಿತು ಯಾರು, ಯಾವ ಟ್ವೀಟ್‌, ಮರು ಟ್ವೀಟ್ ಮಾಡಿದ್ದಾರೆ ಎಂಬ ಸತ್ಯ ಬಯಲಾಗಲಿದೆ. ಅನಗತ್ಯವಾಗಿ ಒಂದು ರಾಜಕೀಯ ಪಕ್ಷ ಈ ಸಮಸ್ಯೆ ಹುಟ್ಟು ಹಾಕಿದೆ’ ಎಂದು ಹೇಳಿದರು.

ADVERTISEMENT

‘ಹೈಕೋರ್ಟ್‌ನ ಸೂಚನೆಯಂತೆ ಎಲ್ಲಾ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಮವಸ್ತ್ರ ಧರಿಸಿ ಶಾಲಾ, ಕಾಲೇಜುಗಳಿಗೆ ಬರಬೇಕು. ಇದನ್ನು ಎಲ್ಲಾ ವಿದ್ಯಾರ್ಥಿಗಳು ಪಾಲಿಸುತ್ತಾರೆ ಎಂಬ ನಂಬಿಕೆ ಇದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.