ADVERTISEMENT

ಸಾಂದರ್ಭಿಕ ಕೂಸು ಹಿಂದುತ್ವದ ಪಾಠ ಮಾಡುತ್ತಿದೆ: ಎಚ್‌ಡಿಕೆ ವಿರುದ್ಧ ಬಿಜೆಪಿ ಗರಂ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಏಪ್ರಿಲ್ 2022, 9:59 IST
Last Updated 2 ಏಪ್ರಿಲ್ 2022, 9:59 IST
ಎಚ್.ಡಿ.ಕುಮಾರಸ್ವಾಮಿ
ಎಚ್.ಡಿ.ಕುಮಾರಸ್ವಾಮಿ   

ಬೆಂಗಳೂರು: ಸಾಂದರ್ಭಿಕ ಕೂಸು ಒಂದು ಹಿಂದುತ್ವದ ಬಗ್ಗೆ ಹಿಂದೂ ಸಂಘಟನೆಗಳಿಗೆ ಪಾಠ ಮಾಡುತ್ತಿದೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಹಿಂದುತ್ವದ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಹಿಂದೂ ಸಂಘಟನೆಗಳು ಕುಮಾರಸ್ವಾಮಿ ಅವರಂತೆ ಕೇವಲ ತನ್ನ ಕುಟುಂಬದ ಉನ್ನತಿಗಾಗಿ ಕೆಲಸ ಮಾಡುತ್ತಿಲ್ಲ. ಅವರು ಅಧಿಕಾರಕ್ಕಾಗಿ ಕಣ್ಣೀರು ಹಾಕುತ್ತಾರೆ ಆದರೆ, ಹಿಂದೂ ಸಂಘಟನೆಗಳು ಹಿಂದೂ ಸಮಾಜದ ಕಣ್ಣೀರು ಒರೆಸುವ ಕೆಲಸ ಮಾಡುತ್ತಿವೆ ಎಂದು #ಹಿಂದೂವಿರೋಧಿಜೆಡಿಎಸ್‌ ಹ್ಯಾಷ್‌ಟ್ಯಾಗ್‌ ಉಲ್ಲೇಖಿಸಿ ಕಿಡಿಕಾರಿದೆ.

‘ಬಾಯಿಗೆ ಬಂದಂತೆ ಮಾತನಾಡುವುದು ಆ ಬಳಿಕ ವಿಷಾದ ವ್ಯಕ್ತಪಡಿಸುವುದು ಸಾಂದರ್ಭಿಕ ಸಿಎಂ ಕುಮಾರಸ್ವಾಮಿ ಅವರ ರಾಜಕೀಯ ವರಸೆಯಾಗಿದೆ. ಯಾವ ವಿಚಾರದಲ್ಲಿ ತನ್ನ ಮತ ಬ್ಯಾಂಕ್‌ ಗಟ್ಟಿಯಾಗುತ್ತದೋ ಆ ವಿಚಾರವನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು ಅವರ ಜಾಯಮಾನ. ಕುಮಾರಸ್ವಾಮಿ ಅವರೇ, ಗಂಡಸುತನ ಬಗ್ಗೆ ಮಾತನಾಡುವುದರಲ್ಲಿ ‘ಪುರುಷಾರ್ಥ’ ಅಡಗಿದೆಯೇ’ ಎಂದು ಬಿಜೆಪಿ ಪ್ರಶ್ನಿಸಿದೆ.

ADVERTISEMENT

‘ಮಾನ್ಯ #LuckyDipCM ಕುಮಾರಸ್ವಾಮಿ ಅವರೇ, ಓತಿಕ್ಯಾತಕ್ಕೆ ಬೇಲಿಯ ಗೂಟ ಸಾಕ್ಷಿ ಎಂಬ ಗಾದೆ ಮಾತು ನೆನಪಿಸಿಕೊಳ್ಳಿ. ನಿಮ್ಮ ಜಾತ್ಯತೀತ ನಡೆ ಎಂಬುದು ಅವಕಾಶವಾದದ ಪರಿಷ್ಕೃತ ರೂಪ. ಅಧಿಕಾರ ಅನುಭವಿಸಲು ಏನೂ ಬೇಕಾದರೂ ಮಾಡಲು ಸಿದ್ದವಾಗಿರುವವರು ನೀವು. ನಿಮ್ಮಿಂದ ಯಾವ ವ್ಯಕ್ತಿಯೂ, ಯಾವ ಸಂಘಟನೆಯೂ ಪಾಠ ಕಲಿಯಬೇಕಾಗಿಲ್ಲ’ ಎಂದು ಬಿಜೆಪಿ ಕಿಡಿಕಾರಿದೆ.

ಉಪಸಭಾಪತಿಯ ಕುರ್ಚಿಗೆ ಗಂಟುಬಿದ್ದು ಅದು ಸಿಗದಿದ್ದಾಗ ಕಾಂಗ್ರೆಸ್‌ ತ್ಯಜಿಸಿ ಜೆಡಿಎಸ್‌ ಸೇರಿರುವ ವ್ಯಕ್ತಿಯ ಸಮುದಾಯವನ್ನು ಮೆಚ್ಚಿಸಲು ಎಚ್‌ಡಿಕೆ ಸರ್ಕಸ್‌ ಮಾಡುತ್ತಿದ್ದಾರೆ. ಇಂತಹ ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ. ಕುಮಾರಸ್ವಾಮಿಯ ರಾಜಕೀಯ ಜೀವನವೇ ಒಂದು ಡ್ರಾಮಾ. ಇವರ ಕುಟುಂಬವೇ ದೊಡ್ಡ ಡ್ರಾಮಾ ಕಂಪನಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.