ಬೆಂಗಳೂರು: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದಲ್ಲಿ ಪಕ್ಷದ ವರಿಷ್ಠರು ನಿರ್ಧಾರವನ್ನು ಪಾಲಿಸುವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, 'ಪಕ್ಷ ಟಿಕೆಟ್ ನೀಡಿದರೆ ಮತ್ತೆ ಚುನಾವಣೆಗೆ ಸ್ಪರ್ಧಿಸುವೆ. ಇಲ್ಲದಿದ್ದರೆ ಸಂಘಟನೆಯ ಕೆಲಸ ಮಾಡುವೆ' ಎಂದರು.
'ಐದು ಬಾರಿ ಚುನಾವಣೆಯಲ್ಲಿ ಸೋತಿದ್ದೇನೆ. ನಾಲ್ಕು ಬಾರಿ ಗೆದ್ದಿದ್ದೇನೆ. ಗೆದ್ದಾಗ ಹಿಗ್ಗಿಲ್ಲ, ಸೋತಾಗ ಕುಗ್ಗಿಲ್ಲ. ಪ್ರಾಮಾಣಿಕವಾಗಿ ಸಂಘಟನೆಯ ಕೆಲಸ ಮಾಡಿಕೊಂಡು ಬಂದಿದ್ದೇನೆ' ಎಂದರು.
ಸ್ಯಾಂಟ್ರೊ ರವಿ ಪ್ರಕರಣದಲ್ಲಿ ತಮ್ಮ ಪಾತ್ರ ಏನೂ ಇಲ್ಲ. ಆತನಿಗೂ ತಮಗೂ ಯಾವುದೇ ಸಂಬಂಧವಿಲ್ಲ. ನಿಷ್ಪಕ್ಷಪಾತವಾಗಿ ತನಿಖೆ ನಡೆದು ಎಲ್ಲ ಸತ್ಯ ಹೊರಬರಲಿ ಎಂದು ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.