ADVERTISEMENT

ಹೊಸಕೋಟೆ: ಶತಕೋಟಿ ಒಡೆಯ ಎಂಟಿಬಿಗೆ ಸೋಲು; ಶರತ್ ಬಚ್ಚೇಗೌಡಗೆ ಜಯ

ಉಪಚುನಾವಣೆ ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2019, 9:00 IST
Last Updated 9 ಡಿಸೆಂಬರ್ 2019, 9:00 IST
   

ಹೊಸಕೋಟೆ: 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದು 7,597 ಮತಗಳ ಅಂತರದಲ್ಲಿ ಸೋಲು ಕಂಡಿದ್ದಶರತ್‌ ಬಚ್ಚೇಗೌಡ, ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ 11 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದಗೆಲುವು ಸಾಧಿಸಿದ್ದಾರೆ.

ಮೈತ್ರಿ ಸರ್ಕಾರದ ವೇಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್‌ನಿಂದ ಹೊರಬಂದಿದ್ದ ಎಂಟಿಬಿ ನಾಗರಾಜುಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಂಡಿದ್ದರು. ಪಕ್ಷದ ನಿರ್ಧಾರವನ್ನು ವಿರೋಧಿಸಿದ್ದ ಶರತ್‌ ಬಚ್ಚೇಗೌಡ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.ಹೀಗಾಗಿ ಈ ಚುನಾವಣೆ ಇಬ್ಬರಿಗೂ ರಾಜಕೀಯ ಅಳಿವು–ಉಳಿವಿನ ಪ್ರಶ್ನೆಯಾಗಿತ್ತು.

ADVERTISEMENT

ಇವರಿಬ್ಬರ ಹೋರಾಟದ ಲಾಭ ಪಡೆಯಲು ಕಾಂಗ್ರೆಸ್‌ ತಂತ್ರ ಹೂಡಿತ್ತು. ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್‌ ಅವರ ಪತ್ನಿ ಪದ್ಮಾವತಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.