ADVERTISEMENT

ಹೊಸೂರು ವಿಮಾನ ನಿಲ್ದಾಣದ ಪ್ರಸ್ತಾವ ಬಂದಿಲ್ಲ: ಕೇಂದ್ರ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2024, 0:09 IST
Last Updated 3 ಆಗಸ್ಟ್ 2024, 0:09 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಹೊಸೂರಿನಲ್ಲಿ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಸ್ಥಾಪನೆ ಸಂಬಂಧ ತಮಿಳುನಾಡು ಸರ್ಕಾರ ಅಥವಾ ವಿಮಾನ ನಿಲ್ದಾಣ ಡೆವಲಪರ್‌ಗಳಿಂದ ಯಾವುದೇ ಪ್ರಸ್ತಾವ ಬಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. 

ಲೋಕಸಭೆಯಲ್ಲಿ ತಮಿಳುನಾಡು ಸಂಸದರೊಬ್ಬರು ಕೇಳಿರುವ ಪ್ರಶ್ನೆಗೆ ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ಮುರಳೀಧರ್‌ ಎಂ. ಈ ಉತ್ತರ ನೀಡಿದ್ದಾರೆ. 

ADVERTISEMENT

‘ತಮಿಳುನಾಡು ಸರ್ಕಾರವು 2 ಸಾವಿರ ಎಕರೆ ಪ್ರದೇಶದಲ್ಲಿ ಹೊಸೂರಿನಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಉದ್ದೇಶಿಸಿದ್ದು, ವಾರ್ಷಿಕ 3 ಕೋಟಿ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿರಲಿದೆ. ಹೊಸ ನಿಲ್ದಾಣವು ಕೃಷ್ಣಗಿರಿ, ಧರ್ಮಪುರಿ ಜಿಲ್ಲೆಗಳ ಕೈಗಾರಿಕಾ ಅಗತ್ಯಗಳನ್ನು ಪೂರೈಸಲಿದೆ’ ಎಂದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇತ್ತೀಚೆಗೆ ಪ್ರಕಟಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.