ADVERTISEMENT

ಹೋಟೆಲ್‌, ರೆಸಾರ್ಟ್‌: ಆಸ್ತಿ ತೆರಿಗೆ ಶೇ 50 ರಿಯಾಯಿತಿ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2021, 22:15 IST
Last Updated 6 ನವೆಂಬರ್ 2021, 22:15 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ (2021–22) ಹೋಟೆಲ್‌, ರೆಸಾರ್ಟ್‌, ರೆಸ್ಟೋರೆಂಟ್‌ ಮತ್ತು ಮನೋರಂಜನಾ ಪಾರ್ಕ್‌ಗಳ ಮಾಲೀಕರು ಪಾವತಿಸುವ ಆಸ್ತಿ ತೆರಿಯಲ್ಲಿ (ಬಿಬಿಎಂಪಿ ಹೊರತುಪಡಿಸಿ) ಶೇ 50ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೋವಿಡ್‌ ಮೊದಲ ಮತ್ತು ಎರಡನೇ ಅಲೆಯಿಂದ ಪ್ರವಾಸೋದ್ಯಮ ವಲಯ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು, ಆಸ್ತಿ ತೆರಿಗೆ ಮನ್ನಾ ಮಾಡುವಂತೆ ಕರ್ನಾಟಕ ಟೂರಿಸಂ ಸೊಸೈಟಿ ಬೇಡಿಕೆ ಸಲ್ಲಿಸಿತ್ತು.

288 ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಹೋಟೆಲ್‌ಗಳು, ಅತಿಥಿಗೃಹಗಳು, ವಸತಿಗೃಹಗಳು, ರೆಸ್ಟೋರೆಂಟ್‌ಗಳಿಂದ ತೆರಿಗೆ ಮತ್ತು ಶೇ 26ರಷ್ಟು ಸೆಸ್‌ ಸೇರಿ ₹ 46.04 ಕೋಟಿ ಸಂಗ್ರಹ ಆಗಬೇಕಿದೆ. ಶೇ 50ರಷ್ಟು ತೆರಿಗೆ ವಿನಾಯಿತಿ ನೀಡಿದರೆ ಸುಮಾರು ₹ 23.02 ಕೋಟಿ ಆರ್ಥಿಕ ನಷ್ಟ ಉಂಟಾಗಲಿದೆ. ಈ ಮೊತ್ತವನ್ನು ಸರಿತೂಗಿಸಲು ರಿಯಾಯಿತಿ ಮೊತ್ತವನ್ನು ನಗರ ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರ ನೀಡಲಿದೆ.

ADVERTISEMENT

ರಿಯಾಯಿತಿ ಷರತ್ತುಗಳೇನು: ಶೇ 50ರಷ್ಟು ತೆರಿಗೆ ಪಾವತಿಸಿ, ಉಳಿದ ಶೇ 50ರಷ್ಟು ರಿಯಾಯಿತಿಗೆ ಹೋಟೆಲ್‌, ರೆಸಾರ್ಟ್‌, ರೆಸ್ಟೋರೆಂಟ್‌ ಮತ್ತು ಮನೋರಂಜನಾ ಪಾರ್ಕ್‌ಗಳ ಮಾಲೀಕರು ಅರ್ಜಿ ಸಲ್ಲಿಸಬೇಕು. ಈ ಅರ್ಜಿಗಳನ್ನು ಕಂದಾಯ ನಿರೀಕ್ಷಕರು ಪರಿಶೀಲಿಸಿದ ಬಳಿಕ, ಜಿಲ್ಲಾಮಟ್ಟದ ಸಮಿತಿ ಸಂಬಂಧಿಸಿದ ಇಲಾಖೆಗೆ ಸಲ್ಲಿಸಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.