ADVERTISEMENT

ಹುಳಿಮಾವು ಕೆರೆ: ಸಂತ್ರಸ್ತರಿಗೆ ₹50 ಸಾವಿರ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2019, 19:45 IST
Last Updated 26 ನವೆಂಬರ್ 2019, 19:45 IST
ಸಂತ್ರಸ್ತರು ಮನೆ ಶುಚಿಗೊಳಿಸುತ್ತಿರುವುದು
ಸಂತ್ರಸ್ತರು ಮನೆ ಶುಚಿಗೊಳಿಸುತ್ತಿರುವುದು   

ಬೆಂಗಳೂರು: ‘ಹುಳಿಮಾವು ಕೆರೆಯ ಕೋಡಿ ಒಡೆದು ಉಂಟಾದ ಪ್ರವಾಹದಿಂದ ಸ್ವತ್ತುಗಳು ಹಾನಿಗೊಳಗಾದ 319 ಕುಟುಂಬಗಳನ್ನು ಗುರುತಿಸಲಾಗಿದ್ದು, ತಲಾ ₹50 ಸಾವಿರ ಪರಿಹಾರಧನವನ್ನು ಕೂಡಲೇ ಸಂತ್ರಸ್ತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರಕಟಿಸಿದರು.

ಪ್ರವಾಹ ಉಂಟಾದ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿದ ಅವರು ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

‘ಅನಾಹುತದಿಂದಾಗಿ ಒಟ್ಟು 630 ಮನೆಗಳು ಹಾನಿಗೊಳಗಾಗಿವೆ. ಕೆಲವು
ಮನೆಗಳು ಸಂಪೂರ್ಣ ನಾಶವಾಗಿವೆ. ತಾತ್ಕಾಲಿಕ ಆಶ್ರಯ ಕೇಂದ್ರದಲ್ಲಿ ಸಂತ್ರಸ್ತರಿಗೆ ಊಟ ವಸತಿ ಸೌಲಭ್ಯಗಳು ಸೇರಿದಂತೆ ಎಲ್ಲ ರೀತಿಯ ನೆರವನ್ನು ಒದಗಿಸಲಾಗುತ್ತಿದೆ’ ಎಂದು ಮುಖ್ಯಮಂತ್ರಿ ತಿಳಿಸಿದರು.

ADVERTISEMENT

‘ಘಟನೆಯ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದೇನೆ. ಭವಿಷ್ಯ
ದಲ್ಲಿ ಇಂತಹ ಅವಘಡಗಳು ಸಂಭವಿಸದಂತೆ ಎಚ್ಚರ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ’ ಎಂದರು.

ಪರಿಹಾರದ ಸಲುವಾಗಿ ಬಿಬಿಎಂಪಿ ₹78 ಲಕ್ಷ ಮೊತ್ತ ಬಿಡುಗಡೆ ಮಾಡಿದೆ.

ಕೆರೆ ಒತ್ತುವರಿ ಸಂಬಂಧ ಜಿಲ್ಲಾಧಿಕಾರಿಯಿಂದ ವರದಿ ಕೇಳಿದ್ದೇನೆ. ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಿದ್ದೇವೆ.
-ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ

ಆರ್ಥಿಕವಾಗಿ ಹಿಂದುಳಿದ 156 ಸಂತ್ರಸ್ತರನ್ನು ಗುರುತಿಸಿದ್ದೇವೆ. ಆದ್ಯತೆ ಮೇರೆಗೆ ಅವರ ಬ್ಯಾಂಕ್‌ ಖಾತೆಗಳಿಗೆ ತಕ್ಷಣವೇ ಪರಿಹಾರವನ್ನು ಬಿಡುಗಡೆ ಮಾಡಲಿದ್ದೇವೆ
-ಬಿ.ಎಚ್‌.ಅನಿಲ್‌ ಕುಮಾರ್‌,
ಬಿಬಿಎಂಪಿ ಆಯುಕ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.