ADVERTISEMENT

ಕರ್ನಾಟಕ ಮಾನವ ಹಕ್ಕುಗಳ ಆಯೋಗಕ್ಕೆ ನಿವೃತ್ತ ಐಎಎಸ್‌ ಅಧಿಕಾರಿ ಶ್ಯಾಂ ಭಟ್ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2024, 16:28 IST
Last Updated 12 ಏಪ್ರಿಲ್ 2024, 16:28 IST
<div class="paragraphs"><p>ಶ್ಯಾಂ ಭಟ್‌</p></div>

ಶ್ಯಾಂ ಭಟ್‌

   

ಬೆಂಗಳೂರು: ಕರ್ನಾಟಕ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರನ್ನಾಗಿ ನಿವೃತ್ತ ಐಎಎಸ್‌ ಅಧಿಕಾರಿ ಟಿ.ಶ್ಯಾಂ ಭಟ್‌ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಈಗ ಅವರು ಆಯೋಗದ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದು, ಹೊಸ ಅಧ್ಯಕ್ಷರ ನೇಮಕ ಆಗುವವರೆಗೆ ಅಥವಾ ಮುಂದಿನ ಆದೇಶದವರೆಗೆ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ.

ADVERTISEMENT

ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶ್ಯಾಂ ಭಟ್‌ ಬಿಡಿಎ ಆಯುಕ್ತರಾಗಿದ್ದರು. ಆಗ ಭ್ರಷ್ಟಾಚಾರದ ಆರೋಪವನ್ನೂ ಅವರು ಎದುರಿಸಿದ್ದರು. ಅದೇ ಸಂದರ್ಭದಲ್ಲಿ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. 

2019ರಲ್ಲಿ ಶ್ಯಾಂ ಭಟ್‌ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದಿಂದ ನಿವೃತ್ತರಾಗಿದ್ದರು. 2023ರ ಮೇ ತಿಂಗಳಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ನವೆಂಬರ್‌ ತಿಂಗಳಲ್ಲಿ ಶ್ಯಾಂ ಭಟ್‌ ಅವರನ್ನು ಮಾನವ ಹಕ್ಕುಗಳ ಆಯೋಗದ ಸದಸ್ಯರನ್ನಾಗಿ ನೇಮಿಸಲಾಯಿತು. ಈಗ ಅಧ್ಯಕ್ಷ ಹುದ್ದೆಗೇರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.