ತುಮಕೂರು: ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ,ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ನೇತೃತ್ವವಹಿಸಿದ್ದಾರೆ, ಶಾಸಕರ ಸಭೆ ನಡೆಸಿದ್ದಾರೆ ಎನ್ನುವ ಬಗ್ಗೆ ನಾನು ಮಾಧ್ಯಮಗಳಲ್ಲಿ ನೋಡಿ ಕೇಳಿ ತಿಳಿದಿದ್ದೇನೆ. ಈ ಬಗ್ಗೆ ನನಗೇನೂ ಗೊತ್ತಿಲ್ಲ ನನಗೇನೂ ಗೊತ್ತಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಇಲ್ಲಿ ತಿಳಿಸಿದರು.
ಯಾರು ಅಸಮಾಧಾನಗೊಂಡಿದ್ದಾರೆ ಏನು ಎನ್ನುವುದು ನನಗೆ ಗೊತ್ತಿಲ್ಲ. ಶಾಸಕ ತಿಪ್ಪಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿರುವುದು ಗೊತ್ತಿಲ್ಲ. ಮಧ್ಯಮದ ಮೂಲಕ ಮಾತ್ರ ವಿಚಾರ ತಿಳಿದಿದ್ದೇನೆ. ನನಗೇನೂ ಗೊತ್ತಿಲ್ಲ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.