ADVERTISEMENT

ಕಾಂಗ್ರೆಸ್‌ ಅಭ್ಯರ್ಥಿ, ಮಾಜಿ ಸ್ಪೀಕರ್‌ ಕೆ.ಬಿ.ಕೋಳಿವಾಡ ಮನೆ ಮೇಲೆ ಐಟಿ ದಾಳಿ 

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2019, 6:35 IST
Last Updated 4 ಡಿಸೆಂಬರ್ 2019, 6:35 IST
ಕೆ.ಬಿ.ಕೋಳಿವಾಡ
ಕೆ.ಬಿ.ಕೋಳಿವಾಡ   

ರಾಣೆಬೆನ್ನೂರು: ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಮಾಜಿ ವಿಧಾನಸಭಾ ಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರ ವಾಗೀಶನಗರದ ಕಾಂಗ್ರೆಸ್‌ ಕಚೇರಿ (ವಾಸದ ಮನೆ) ಮೇಲೆ ಐಟಿ ಮತ್ತು ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳು ಮಂಗಳವಾರ ತಡರಾತ್ರಿ ದಾಳಿ ನಡೆಸಿದ್ದಾರೆ.

ಉಪ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಮತ್ತು ಮದ್ಯ ದಾಸ್ತಾನು ಇರುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.

ಸದ್ಯ ಅಧಿಕಾರಿಗಳು ಮನೆಯಲ್ಲಿ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ದಾಳಿ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು, ಅಭಿಮಾನಿಗಳು ತೀವ್ರ ಪ್ರತಿಭಟನೆ ನಡೆಸಿದರು. ಮನೆಗೆ ಪೊಲೀಸ್‌ ಸರ್ಪಗಾವಲು ಹಾಕಲಾಗಿದೆ.

ADVERTISEMENT

ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಕೋಳಿವಾಡ, ‘ಐಟಿ ಅಧಿಕಾರಿಗಳು ನಮ್ಮ ಮನೆಯಲ್ಲಿ ಪರಿಶೀಲನೆ ನಡೆಸಿರುವುದು ನಿಜ. ಅವರಿಗೆ ಏನೂ ಸಿಗದ ಕಾರಣ ಬರಿಗೈಯಲ್ಲಿ ವಾಪಸ್ ಆಗಿದ್ದಾರೆ’ ಎಂದು ಹೇಳಿದರು.

ರಾಜಕೀಯ ದುರುದ್ದೇಶದಿಂದ ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಹಾಗಾಗಿ ಕಾಂಗ್ರೆಸ್‌ ನಾಯಕರಾದ ಪಿ. ಚಿದಂಬರಂ, ಡಿ.ಕೆ.ಶಿವಕುಮಾರ್‌ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.