ADVERTISEMENT

ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನೂ ಮುಖ್ಯಮಂತ್ರಿ ಆಗುವೆ: ದೇಶಪಾಂಡೆ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2024, 11:39 IST
Last Updated 1 ಸೆಪ್ಟೆಂಬರ್ 2024, 11:39 IST
<div class="paragraphs"><p>ಆರ್‌.ವಿ. ದೇಶ‍ಪಾಂಡೆ ಹಾಗೂ ಸಿದ್ದರಾಮಯ್ಯ</p></div>

ಆರ್‌.ವಿ. ದೇಶ‍ಪಾಂಡೆ ಹಾಗೂ ಸಿದ್ದರಾಮಯ್ಯ

   

ಮೈಸೂರು: ‘ಹೈಕಮಾಂಡ್ ಒಪ್ಪಿದರೆ ಹಾಗೂ ಸಿದ್ದರಾಮಯ್ಯ ಅನುಮತಿ ಕೊಟ್ಟರೆ ನಾನು ಮುಖ್ಯಮಂತ್ರಿ ಆಗುತ್ತೇನೆ. ಆದರೆ, ಈಗ ಆ ಸ್ಥಾನದ ಬದಲಾವಣೆ ಪ್ರಶ್ನೆಯೇ ಇಲ್ಲ’ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್‌.ವಿ. ದೇಶ‍ಪಾಂಡೆ ಹೇಳಿದರು.

ಇಲ್ಲಿ ಪತ್ರಕರ್ತರೊಂದಿಗೆ ಭಾನುವಾರ ಮಾತನಾಡಿದ ಅವರು, ‘ನಾನು ಸಿದ್ದರಾಮಯ್ಯಗಿಂತ ಎರಡು ವರ್ಷ ದೊಡ್ಡವನು. ಸಚಿವ ಆಗಿ ಆಗಿ ದಣಿದಿದ್ದೇನೆ. ಇನ್ನೇನಿದ್ದರೂ ಮುಖ್ಯಮಂತ್ರಿ ಆಗಬೇಕಷ್ಟೆ. ಎಲ್ಲರಂತೆಯೇ ನನಗೂ ಆಸೆ ಇದೆ; ಜೀವನದಲ್ಲಿ ಮಹತ್ವಾಕಾಂಕ್ಷೆ ಇರಬೇಕು’ ಎಂದರು.

ADVERTISEMENT

‘ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ. ನನಗೆ ಗೊತ್ತಿಲ್ಲದೆ ಅಂಥ ಯಾವ ಚರ್ಚೆಯೂ ನಡೆಯಲು ಸಾಧ್ಯವಿಲ್ಲ. ಗೃಹ ಸಚಿವ ಜಿ.ಪರಮೇಶ್ವರ್ ಹಾಗೂ ಸತೀಶ ಜಾರಕಿಹೊಳಿ ನಡೆಸಿರುವ ಸಭೆ ಇಲಾಖೆಗಳಿಗೆ ಸಂಬಂಧಪಟ್ಟಿದ್ದಷ್ಟೆ. ಸಿದ್ದರಾಮಯ್ಯ ಅವಧಿ ಪೂರೈಸುತ್ತಾರೆ’ ಎಂದು ಪ್ರತಿಕ್ರಿಯಿಸಿದರು.

‘ಮುಡಾ ವಿಚಾರದಲ್ಲಿ ಸಿದ್ದರಾಮಯ್ಯ ತಪ್ಪೇ ಮಾಡಿಲ್ಲ’ ಎಂದು ಸಮರ್ಥಿಸಿಕೊಂಡ ಅವರು, ‘ಸಾವಿರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎನ್ನುತ್ತಿರುವವರು, ಆರೋಪದ ಬಗ್ಗೆ ದಾಖಲೆ ಕೊಟ್ಟರೆ ನಾನೇ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ’ ಎಂದರು.

‘ಟೆಲಿಫೋನ್ ಕದ್ದಾಲಿಕೆ ಆರೋಪ ಬಂದ ತಕ್ಷಣ ರಾಮಕೃಷ್ಣ ಹೆಗೆಡೆ ರಾಜೀನಾಮೆ ಕೊಟ್ಟಿದ್ದರು. ಈಗ ದಿನವೂ ಫೋನ್ ಕದ್ದಾಲಿಕೆ ನಡೆಯುತ್ತಿದೆ. ಈಗ ಮೌಲ್ಯ ಆಧರಿತ ರಾಜಕಾರಣ ನಡೆಯುತ್ತಿಲ್ಲ’ ಎಂದು ವಿಷಾದ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.