ADVERTISEMENT

ನಿಂಬಾಳ್ಕರ್‌ ವಾರ್ತಾ ಇಲಾಖೆ ಆಯುಕ್ತ

​ಪ್ರಜಾವಾಣಿ ವಾರ್ತೆ
Published 2 ಜುಲೈ 2024, 16:41 IST
Last Updated 2 ಜುಲೈ 2024, 16:41 IST
ಹೇಮಂತ್‌ ನಿಂಬಾಳ್ಕರ್‌
ಹೇಮಂತ್‌ ನಿಂಬಾಳ್ಕರ್‌   

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ, ಎಡಿಜಿಪಿ ಹೇಮಂತ್ ಎಂ. ನಿಂಬಾಳ್ಕರ್‌ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ಮತ್ತೆ ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಂಗಳವಾರ ಆದೇಶಿಸಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದ ಸುರಳ್ಕರ್‌ ವಿಕಾಸ್‌ ಕಿಶೋರ್‌ ಅವರನ್ನು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಎಂ. ಕನಗವಲ್ಲಿ ಅವರನ್ನು ಸಾರ್ವಜನಿಕ ಗ್ರಂಥಾಲಯಗಳ ಇಲಾಖೆಯ ಆಯುಕ್ತರನ್ನಾಗಿ ನಿಯೋಜಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.