ಶಿವಮೊಗ್ಗ: ಲಕ್ಕವಳ್ಳಿಯ ಭದ್ರಾ ಜಲಾಶಯದಿಂದ ಎಡ ಹಾಗೂ ಬಲದಂಡೆ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಸೋಮವಾರ ನಡೆದ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಇಲ್ಲಿನ ಮಲವಗೊಪ್ಪದ ಭದ್ರಾ ಕಾಡಾ ಸಮಿತಿ ಕಚೇರಿ ಸಭಾಂಗಣದಲ್ಲಿ ನೀರಾವರಿ ಸಲಗಾ ಸಮಿತಿ ಅಧ್ಯಕ್ಷ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸಭೆ ನಡೆಯಿತು.
ಸಭೆ ಮುಗಿದ ತಕ್ಷಣ ಇಲ್ಲವೇ ರಾತ್ರಿ ಕಾಲುವೆಗೆ ನೀರು ಹರಿಸುವಂತೆ ಅಧ್ಯಕ್ಷ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ, ದಾವಣಗೆರೆ ಜಿಲ್ಲೆ ಹೊನ್ನಾಳಿ ಶಾಸಕ ಡಿ.ಜಿ.ಶಾಂತನಗೌಡ, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ, ಹರಿಹರ ಶಾಸಕ ಬಿ.ಪಿ.ಹರೀಶ, ಮಾಯಕೊಂಡ ಶಾಸಕ ಬಸವಂತಪ್ಪ, ವಿಜಯ ನಗರ ಜಿಲ್ಲೆ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ, ಕಾಡಾ ಅಧ್ಯಕ್ಷ ಡಾ.ಅಂಶುಮಂತ್ , ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಜಿಲ್ಲಾಧಿಕಾರಿ, ರೈತ ಮುಖಂಡರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.