ಬೆಂಗಳೂರು: ಇಲ್ಲಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆ ಎಂದು ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್ ಫ್ರೇಮ್‌ವರ್ಕ್ (NIRF) ಘೋಷಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.
ಕೇಂದ್ರ ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿದ ರ‍್ಯಾಂಕಿಂಗ್ ಪಟ್ಟಿಯಲ್ಲಿ ಐಐಎಸ್‌ಸಿ ತನ್ನ ಅಗ್ರ ಪಟ್ಟ ಕಾಯ್ದುಕೊಂಡಿದೆ. ನಂತರದ ಸ್ಥಾನದಲ್ಲಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಹಾಗೂ ಜಾಮಿಯಾ ಮಿಲಿಯಾ ಇಸ್ಲಾಮಿಯಾ ನಂತರದ ಸ್ಥಾನಗಳನ್ನು ಪಡೆದಿವೆ.
ಕೊಲ್ಕತ್ತದ ಜಾಧವಪುರ ವಿಶ್ವವಿದ್ಯಾಲಯ, ವಾರಣಾಸಿಯ ಬನಾರಸ್ ಹಿಂದು ವಿಶ್ವವಿದ್ಯಾಲಯ, ಮಣಿಪಾಲದ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ, ಕೊಯಂಬತ್ತೂರಿನ ಅಮೃತಾ ವಿಶ್ವ ವಿದ್ಯಾಪೀಠಂ, ವೆಲ್ಲೂರಿನ ವೆಲ್ಲೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಅಲಿಘಡದ ಅಲಿಘಡ ಮುಸ್ಲಿಂ ವಿಶ್ವವಿದ್ಯಾಲಯ, ಹೈದರಾಬಾದ್‌ನ ಯೂನಿವರ್ಸಿಟಿ ಆಫ್ ಹೈದರಾಬಾದ್ ಕ್ರಮವಾಗಿ ನಂತರದ ಸ್ಥಾನಗಳನ್ನು ಪಡೆದುಕೊಂಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.