ಬೆಂಗಳೂರು: ‘ನಿರ್ದಿಷ್ಟವಾಗಿ ಇಂತಹ ಕಡೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದನ್ನು ದಾಖಲೆ ಸಹಿತ ನೀಡಿದರೆ, ಕಾನೂನು ಕ್ರಮ ಜರುಗಿಸಲು ಹಿಂದೆಮುಂದೆ ನೋಡುವುದಿಲ್ಲ’ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಅನಿಲ್‍ಕುಮಾರ್ ಅವರ ಪ್ರಶ್ನೆಗೆ ಅವರು ಉತ್ತರಿಸಿದರು.
‘ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ಅನೇಕ ಕಡೆ ಕಾನೂನುಬಾಹಿರವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಕಾನೂನುಬಾಹಿರ ಚಟುವಟಿಕೆ, ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಕೋಲಾರದಲ್ಲಿ ಗೋಪಿ ಎಂಬ ಅಧಿಕಾರಿ 14 ವರ್ಷದಿಂದ ಒಂದೇ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಏಕೆ ವರ್ಗಾವಣೆ ಮಾಡಿಲ್ಲ’ ಎಂದು ಅನಿಲ್ ಕುಮಾರ್ ಪ್ರಶ್ನಿಸಿದರು.
ಅದಕ್ಕೆ ತಿಮ್ಮಾಪೂರ, ‘ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ಆ ಅಧಿಕಾರಿಯನ್ನು ವರ್ಗಾವಣೆ ಮಾಡುತ್ತೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.