ಬೆಂಗಳೂರು: ಸಾವಿರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿರುವ ಐಎಂಎ ಜ್ಯುವೆಲ್ಸ್ ಕಂಪನಿ ಮಾಲೀಕ ಮನ್ಸೂರ್ ಖಾನ್ ಪತ್ತೆಗೆ ‘ಇಂಟರ್‌ಪೋಲ್’ ಬ್ಲೂ ಕಾರ್ನರ್ ನೋಟಿಸ್ ಹೊರಡಿಸಿದೆ.
ಕ್ರಿಮಿನಲ್ ಪ್ರಕರಣಗಳಲ್ಲಿ ವಿಚಾರಣೆಗೆ ಬೇಕಾಗಿರುವ ವ್ಯಕ್ತಿ ಪರಾರಿಯಾದಾಗ, ಅವರ ಬಗ್ಗೆ ಮಾಹಿತಿ ಸಂಗ್ರಹಿಸಿ, ಪತ್ತೆ ಹಚ್ಚುವ ಉದ್ದೇಶದಿಂದ ಹೊರಡಿಸುವ ನೋಟಿಸ್ ಇದಾಗಿದೆ. ರಾಜ್ಯ ಪೊಲೀಸರ ಮನವಿ ಮೇರೆಗೆ ಸಿಬಿಐ ಇಂಟರ್‌ಪೋಲ್‌ಗೆ ಪತ್ರ ಬರೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.