ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಆಭರಣ ಮಳಿಗೆಐಎಂಎ ಸಮೂಹ ಸಂಸ್ಥೆಗಳಹಗರಣ ತನಿಖೆಗೆ ರಾಜ್ಯ ಸರ್ಕಾರವೂ ಬುಧವಾರ ಡಿಐಜಿ ಬಿ.ಆರ್ ರವಿಕಾಂತೇಗೌಡ ಅವರ ನೇತೃತ್ವದಲ್ಲಿ ವಿಶೇಷ ತನಿಖಾ ದಳ ರಚನೆ ಮಾಡಿ ಆದೇಶ ಹೊರಡಿಸಿದೆ.
'ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂಬುದಾಗಿ ಕಂಪನಿ ಮಾಲೀಕ ಮೊಹಮ್ಮದ್ ಮನ್ಸೂರ್ ಖಾನ್ ಹೆಸರಿನಲ್ಲಿ ಆಡಿಯೊವೊಂದನ್ನು ವಾಟ್ಸ್‌ಆ್ಯಪ್‌ನಲ್ಲಿ ಹರಿಬಿಡಲಾಗಿತ್ತು.ಮಾತ್ರವಲ್ಲದೆ, ಶಿವಾಜಿನಗರದಲ್ಲಿರುವ ‘ಐಎಂಎ ಸಮೂಹ ಕಂಪನಿ’ಯ ಪ್ರಧಾನ ಕಚೇರಿ ಇದೇ 5 ರಿಂದ ಬಂದ್ ಆಗಿತ್ತು. ಈ ಹಿನ್ನೆಲೆಯಲ್ಲಿ ಹೂಡಿಕೆದಾರರು ಆತಂಕಗೊಂಡಿದ್ದು, ಹಣಕ್ಕಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ನಡುವೆ ಪ್ರಕರಣದಲ್ಲಿ ಶಾಸಕ ರೋಷನ್ ಬೇಗ್ ಸೇರಿದಂತೆ ಹಲವು ರಾಜಕಾರಣಿಗಳ ಹೆಸರುಗಳೂ ತಳುಕು ಹಾಕಿಕೊಂಡಿವೆ. ಸಾರ್ವಜನಿಕರನ್ನು ತಲ್ಲಣಗೊಳಿಸಿರುವ ಈ ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ತಂಡದಲ್ಲಿ ಯಾರಿದ್ದಾರೆ?
ತನಿಖಾ ತಂಡದಲ್ಲಿ ಐಪಿಎಸ್ ಅಧಿಕಾರಿಗಳಾದ ಎಸ್. ಗಿರೀಶ್, ಬಾಲರಾಜು, ರವಿಶಂಕರ್, ರಾಜ ಇಮಾಮ್ ಖಾಸಿಮ್, ಪೊಲೀಸ್ ಇನ್‌ಸ್ಪೆಕ್ಟರ್‌ಗಳಾದ ಸಿ.ಆರ್. ಗೀತಾ, ಎಲ್.ವೈ ರಾಜೇಶ್, ಅಂಜನ್ ಕುಮಾರ್, ಎನ್. ತನ್ವೀರ್ ಅಹ್ಮದ್, ಬಿ.ಕೆ. ಶೇಖರ್ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.