ADVERTISEMENT

‘ಐಎಂಎ ಸಮೂಹ ಕಂಪನಿ’ ವಿವಾದ| ‘ಪ್ರಕರಣ ಸಿಸಿಬಿಗೆ ವಹಿಸಲಾಗಿದೆ’ –ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 11 ಜೂನ್ 2019, 10:26 IST
Last Updated 11 ಜೂನ್ 2019, 10:26 IST
   

ಬೆಂಗಳೂರು: ‘ಐಎಂಎ ಸಮೂಹ ಕಂಪನಿ’ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸಿಸಿಬಿಗೆ ವಹಿಸಲಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

‘ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂಬುದಾಗಿ ಕಂಪನಿ ಮಾಲೀಕ ಮೊಹಮ್ಮದ್ ಮನ್ಸೂರ್ ಖಾನ್‌ ಹೆಸರಿನಲ್ಲಿ ಆಡಿಯೊವೊಂದು ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡಿತ್ತು. ಮಾತ್ರವಲ್ಲದೆ, ಶಿವಾಜಿನಗರದಲ್ಲಿರುವ‘ಐಎಂಎ ಸಮೂಹ ಕಂಪನಿ’ಯ ಪ್ರಧಾನ ಕಚೇರಿ ಇದೇ 5 ರಿಂದ ಬಂದ್‌ ಆಗಿದೆ.

ಕಂಪೆನಿಯಲ್ಲಿ ಸಾವಿರಾರು ಕೋಟಿ ಮೌಲ್ಯದ ಷೇರು ಹೊಂದಿರುವ ಸಾವಿರಾರು ಹೂಡಿಕೆದಾರರು ಇದರಿಂದಆತಂಕಕ್ಕೊಳಗಾಗಿ ಕಚೇರಿ ಎದುರು ಜಮಾಯಿಸಿ ಸೋಮವಾರ ಭಾರಿ ಪ್ರತಿಭಟನೆ ನಡೆಸಿದ್ದರು.

ADVERTISEMENT

ಈ ಸಂಬಂಧ ಮುಖ್ಯಮಂತ್ರಿ ಅವರು ಟ್ವಿಟರ್‌ ಮೂಲಕ, ‘#IMAJewels ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಹೂಡಿಕೆದಾರರ ಆತಂಕವನ್ನು ಸರ್ಕಾರ ಅರ್ಥ ಮಾಡಿಕೊಂಡಿದ್ದು ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಗೃಹ ಸಚಿವರಾದ @MBPatil ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದು ಪ್ರಕರಣವನ್ನು ಶೀಘ್ರ ಇತ್ಯರ್ಥಗೊಳಿಸಲು ಸೂಚಿಸಿದ್ದೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.