ADVERTISEMENT

ಐಎಂಎ ಮನ್ಸೂರ್‌ಖಾನ್‌ನನ್ನು ಬಂಧಿಸಿದ್ದು ನಮ್ಮ ಎಸ್‌ಐಟಿ ಅಧಿಕಾರಿಗಳು: ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2019, 13:52 IST
Last Updated 23 ಜುಲೈ 2019, 13:52 IST
   

ಬೆಂಗಳೂರು: ‘ಐಎಂಎ ಮನ್ಸೂರ್‌ಖಾನ್‌ನನ್ನು ದುಬೈನಿಂದ ಕರೆದು ತಂದಿದ್ದು ನಮ್ಮ ರಾಜ್ಯ ಸರ್ಕಾರದ ವಿಶೇಷ ಕಾರ್ಯಪಡೆ (ಎಸ್‌ಐಟಿ) ಅಧಿಕಾರಿಗಳು’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಧಿಕಾರಿಗಳ ಬೆನ್ನುತಟ್ಟಿದರು.

ವಿಧಾನಸಭೆಯ ಭಾಷಣದಲ್ಲಿ ಎಸ್‌ಐಟಿ ಕಾರ್ಯಾಚರಣೆ ವಿವರಿಸಿದ ಅವರು, ‘ದುಬೈನರಾಜತಾಂತ್ರಿಕ ಅಧಿಕಾರಿಗಳ ಅನುಮತಿ ಮೇರೆಗೆ ಮನ್ಸೂರ್‌ಖಾನ್‌ನನ್ನು ಭಾರತಕ್ಕೆ ಕರೆತರಲಾಯಿತು. ಅದಕ್ಕಾಗಿ ಶ್ರಮಿಸಿದವರು ನಮ್ಮ ಅಧಿಕಾರಿಗಳು’ ಎಂದರು.

ಆದರೆ ಮನ್ಸೂರ್‌ಖಾನ್‌ ದೆಹಲಿಯಲ್ಲಿ ಲ್ಯಾಂಡ್ ಆದ ತಕ್ಷಣ ಅವನನ್ನು ವಿಚಾರಣೆ ನೆಪದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದರು. ಇಲ್ಲಿಯವರೆಗೆ ಏನೂ ಗೊತ್ತಾಗಲಿಲ್ಲ. ಆದರೆಮನ್ಸೂರ್‌ನನ್ನುಏಕೆ ಕರೆದೊಯ್ದರು? ಯಾರ್ಯಾರನ್ನು ಹೊಸದಾಗಿ ಫಿಕ್ಸ್ ಮಾಡ್ತೀರಿ ಸ್ವಾಮಿ? ಎಂದು ಕುಮಾರಸ್ವಾಮಿ ಬಿಜೆಪಿಶಾಸಕರತ್ತ ವ್ಯಂಗ್ಯ ನೋಟ ಬೀರಿದರು.

ADVERTISEMENT

‘ಐಎಂಎ ಪ್ರಕರಣದಲ್ಲಿ ಸಿಲುಕಿರುವ ಶಾಸಕರೊಬ್ಬರುಇವರನ್ನು ಮುಖ್ಯಮಂತ್ರಿ ಮಾಡಲು ಮುಂದೆ ಬಂದಿದ್ದಾರೆ. ಬಡವರ ಹಣ ಲೂಟಿ ಮಾಡಿದ್ದು ಬಿಟ್ಟುಬಿಟ್ರು. ಅಧಿಕಾರ ದುರುಪಯೋಗಪಡಿಸಿಕೊಂಡು ಅರೆಸ್ಟ್ ಮಾಡಿಸ ಹೋದರು ಅಂತ ಹೇಳಿಕೆ ಕೊಟ್ಟಿದ್ದಾರೆ’ ಇದು ಸರಿಯಾ?ಎಂದು ಪ್ರಶ್ನಿಸಿದರು.

‘ಪ್ರಜಾವಾಣಿ’ ಸುದ್ದಿ, ಬರಹಗಳಲ್ಲಿ ರಾಜಕೀಯ ಬೆಳವಣಿಗೆಗಳ ಸಮಗ್ರ ನೋಟ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.