ಬೆಂಗಳೂರು: ಗೃಹ ಸಚಿವ ಜಿ.ಪರಮೇಶ್ವರ ಆಪ್ತ ಎಂ.ಸಿ ವೇಣುಗೋಪಾಲ್ ಅವರ ಮನೆ ಮೇಲೆ ಗುರುವಾರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು (ಐಟಿ) ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್‌ನ ಮಾಜಿ ಸದಸ್ಯರೂ ಆದ ವೇಣುಗೋಪಾಲ್ ಅವರ ಬೆಂಗಳೂರಿನ ಜೆ.ಪಿ. ನಗರದಲ್ಲಿರುವ ಮನೆಗೆ ಮುಂಜಾನೆ 6ಕ್ಕೆ ನಾಲ್ಕು ಇನ್ನೋವಾ ಕಾರಿನಲ್ಲಿ ಬಂದ 15ಕ್ಕೂ ಹೆಚ್ಚು ಮಂದಿ ಇದ್ದ ಅಧಿಕಾರಿಗಳ ತಂಡ ವಿವಿಧ ದಾಖಲೆ ಪತ್ರಗಳ ಪರಿಶೀಲನೆ ನಡೆಸಿತು.
ದಾಳಿ ವೇಳೆ ವೇಣುಗೋಪಾಲ್ ಮನೆಯಲ್ಲೇ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.