ADVERTISEMENT

ಇನ್ಫೋಸಿಸ್‌ ಫೌಂಡೇಷನ್‌ನಿಂದ 50 ಕಂಪ್ಯೂಟರ್‌ ಕೊಡುಗೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 13:46 IST
Last Updated 20 ಜುಲೈ 2021, 13:46 IST

ಬೆಂಗಳೂರು: ಇನ್ಫೋಸಿಸ್‌ ಫೌಂಡೇಷನ್‌, ಚಾಮರಾಜಪೇಟೆಯಲ್ಲಿರುವ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ 50 ಕಂಪ್ಯೂಟರ್‌ಗಳನ್ನು ಕೊಡುಗೆಯಾಗಿ ನೀಡಿದೆ.

‘ವಿಶ್ವವಿದ್ಯಾಲಯದ ಇ–ಆಡಳಿತ ವಿಭಾಗದಿಂದ ಕಂಪ್ಯೂಟರ್‌ ಪ್ರಯೋಗಾಲಯ ಆರಂಭಿಸಲಾಗುತ್ತಿದೆ. ಹೀಗಾಗಿ ಇನ್ಫೋಸಿಸ್‌ ಫೌಂಡೇಷನ್‌ 50 ಕಂಪ್ಯೂಟರ್‌ಗಳನ್ನು ಒದಗಿಸಿದೆ. ಇದರಿಂದ ಸ್ನಾತಕೋತ್ತರ ಪದವಿ ಹಾಗೂ ಸಂಶೋಧನೆಯಲ್ಲಿ ತೊಡಗಿಕೊಂಡಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ’ ಎಂದು ಕುಲಪತಿ ಪ್ರೊ.ಕೆ.ಇ.ದೇವನಾಥನ್‌ ತಿಳಿಸಿದ್ದಾರೆ.

‘ವಿದ್ಯಾರ್ಥಿಗಳ ಹಿತ ಗಮನದಲ್ಲಿಟ್ಟುಕೊಂಡು ಕಂಪ್ಯೂಟರ್‌ಗಳನ್ನು ಒದಗಿಸಿರುವ ಇನ್ಫೋಸಿಸ್‌ ಫೌಂಡೇಷನ್‌ ಮುಖ್ಯಸ್ಥೆ ಸುಧಾ ಮೂರ್ತಿ ಅವರಿಗೆ ನಾವು ಆಭಾರಿಯಾಗಿದ್ದೇವೆ. ಇವರ ಕಾರ್ಯ ಇತರರಿಗೂ ಮಾದರಿಯಾಗಲಿ’ ಎಂದು ಕುಲಸಚಿವ ಪ್ರೊ.ಎಂ.ಕೊಟ್ರೇಶ್‌ ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.