ADVERTISEMENT

ರೌಡಿ ಪಟ್ಟಿಯಿಂದ ಅಮಾಯಕರ ಹೆಸರು ಹೊರಕ್ಕೆ: ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2021, 22:32 IST
Last Updated 6 ಸೆಪ್ಟೆಂಬರ್ 2021, 22:32 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ   

ಬೆಂಗಳೂರು: ‘ಕನ್ನಡ, ರೈತ ಹಾಗೂ ಜನಪರ ಚಳವಳಿಗಳಲ್ಲಿ ಭಾಗವಹಿಸಿದವರು ಅಮಾಯಕರಾಗಿದ್ದು, ಅಂತಹವರೂ ಸೇರಿ ದಂತೆ ಅಮಾಯಕರ ಹೆಸರುಗಳು ರೌಡಿಪಟ್ಟಿಯಲ್ಲಿ ಸೇರ್ಪಡೆಯಾಗಿದ್ದರೆ ಅವುಗಳನ್ನು ಕೈಬಿಡಲು ಕ್ರಮವಹಿ ಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿರುವ ರೌಡಿ ಪಟ್ಟಿಯನ್ನು ಕಾನೂನಿನ ಮಾನದಂಡಗಳ ಪ್ರಕಾರ ಮರು ಪರಿಶೀಲಿಸಬೇಕು. ಈ ರೀತಿಯ ವೈಜ್ಞಾನಿಕವಾಗಿ ಪರಿಷ್ಕರಿಸುವ ಅಧಿಕಾರವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನೀಡಲಾಗಿದೆ’ ಎಂದು ಹೇಳಿದರು.

‘ವೀಸಾ ಅವಧಿ ಮುಗಿದರೂ ರಾಜ್ಯದಲ್ಲಿ ಅಕ್ರಮವಾಗಿ ನೆಲಸಿರುವ ವಿದೇಶಿ ನಾಗರಿಕರನ್ನು ಗುರುತಿಸಿ ಅವರು ನಡೆಸುತ್ತಿರುವ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಬೇಕೆಂದು ನಿರ್ದೇಶನ ನೀಡಲಾಗಿದೆ’ ಎಂ ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.