ಮಂಡ್ಯ: ‘ತುಂಗಭದ್ರಾ ಜಲಾಶಯದಲ್ಲಿ ದೊಡ್ಡ ಅನಾಹುತವಾಗಿದೆ. ಜಲಾಶಯದ 60 ಟಿಎಂಸಿ ನೀರು ಖಾಲಿಯಾಗುತ್ತದೆ. ಟಿ.ಬಿ ಡ್ಯಾಂ ಬೋರ್ಡ್ ಟೆಕ್ನಿಕಲ್ ವಿಚಾರದಲ್ಲಿ ಕಾಟಾಚಾರದ ವರದಿ ಕೊಟ್ಟಿವೆ. ಅದಕ್ಕಾಗಿ ಇಂತಹ ಪರಿಸ್ಥಿತಿ ಬಂದಿದೆ. ಇದು ಇದು ರೈತರ ಬದುಕಿನ ಆಶಾಭಾವನೆಗೆ ಧಕ್ಕೆ ತಂದಿದೆ’ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
‘ಕೆಆರ್‌ಎಸ್ ಅಣೆಕಟ್ಟೆ ವಿಚಾರದಲ್ಲೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಕೆಆರ್‌ಎಸ್ ಡ್ಯಾಂ ಕಟ್ಟುವಾಗ ‘ಸ್ಟಾಪ್ ಲಾಕ್ ಗೇಟ್’ ಇಲ್ಲದ ಕಾರಣ ಅದನ್ನು ಅಳವಡಿಸಿಲ್ಲ. ತುಂಗಭದ್ರಾ ಪರಿಸ್ಥಿತಿ ಗಮನಿಸಿದರೆ, ದೂರ ದೃಷ್ಟಿಯಿಂದ ಕೆಆರ್‌ಎಸ್‌ಗೆ ಸ್ಟಾಪ್ ಲಾಕ್ ಗೇಟ್ ಹಾಕಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.