ಬೆಂಗಳೂರು: 2023–24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿದಂತೆ ಗಿಗ್ ಕಾರ್ಮಿಕರಿಗೆ ವಿಮಾ ಸೌಲಭ್ಯ ಜಾರಿಗೊಳಿಸುವ ತೀರ್ಮಾನವನ್ನು ರಾಜ್ಯಪತ್ರದಲ್ಲಿ ಪ್ರಕಟಿಸಲಾಗಿದೆ.
ಸ್ವಿಗ್ಗಿ, ಜೊಮಾಟೋ, ಅಮೆಜಾನ್, ಫ್ಲಿಪ್‌ಕಾರ್ಟ್, ಬಿಗ್‌ಬ್ಯಾಸ್ಕೆಟ್ ಮತ್ತಿತರ ಸಂಸ್ಥೆಗಳಲ್ಲಿ ಡೆಲಿವರಿ ಬಾಯ್‌ಗಳಾಗಿ ಕೆಲಸ ಮಾಡುವವರಿಗೆ ಸಾಮಾಜಿಕ ಭದ್ರತೆ ನೀಡಲು ₹2 ಲಕ್ಷ ಜೀವ ವಿಮೆ ಮತ್ತು ₹2 ಲಕ್ಷ ಅಪಘಾತ ಪರಿಹಾರ ವಿಮಾಸೌಲಭ್ಯ ಸೇರಿ ಒಟ್ಟು ₹4 ಲಕ್ಷ ವಿಮಾ ಸೌಲಭ್ಯ ಜಾರಿ ಮಾಡಲಾಗುವುದು. ಇದನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಮೂಲಕ ಜಾರಿ ಮಾಡಲು ಆದೇಶಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.