ADVERTISEMENT

DNP ರೇಷ್ಮೆ ಭವನಕ್ಕೆ ಹೂಡಿಕೆ | ಪ್ರಸ್ತಾವನೆ ಮಂಡಿಸಿ: ಸಿಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 7 ಜನವರಿ 2024, 0:30 IST
Last Updated 7 ಜನವರಿ 2024, 0:30 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ನಗರದ ಓಕುಳಿಪುರಂನಲ್ಲಿ ರೇಷ್ಮೆ ಇಲಾಖೆಗೆ ಸೇರಿದ ಜಾಗದಲ್ಲಿ ರೇಷ್ಮೆ ಭವನ ನಿರ್ಮಾಣಕ್ಕೆ ಹೂಡಿಕೆ ಮಾಡಲು ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮ ಮುಂದೆ ಬಂದಿದ್ದು, ಈ ಕುರಿತು ಸಚಿವ ಸಂಪುಟ ಸಭೆಗೆ ವಿವರವಾದ ಪ್ರಸ್ತಾವನೆ ಮಂಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಈ ಯೋಜನೆಯ ರೂಪುರೇಷೆಗಳ ಕುರಿತ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದ ಮುಖ್ಯಮಂತ್ರಿ, ನಗರದ ಕೇಂದ್ರ ಭಾಗದಲ್ಲಿ ಈ ಜಾಗ ಇರುವುದರಿಂದ ಇದರ ಸದುಪಯೋಗ ಮಾಡಿಕೊಳ್ಳುವ ಕುರಿತು ವಿವರವನ್ನೂ ಸಲ್ಲಿಸಬೇಕು ಎಂದು ತಿಳಿಸಿದರು.

ADVERTISEMENT

ಈ ಜಾಗದಲ್ಲಿ ವ್ಯಾಪಾರಿ ಮಳಿಗೆಗಳು, ಕಚೇರಿಗಳನ್ನು ನಿರ್ಮಿಸಿ, ಬಾಡಿಗೆಗೆ ನೀಡುವ ಮೂಲಕ ಬರುವ ಆದಾಯವನ್ನು ರೇಷ್ಮೆ ಇಲಾಖೆ ಹಾಗೂ ಕರ್ನಾಟಕ ಗಣಿಗಾರಿಕೆ ಅಭಿವೃದ್ಧಿ ನಿಗಮವು ಹಂಚಿಕೆ ಮಾಡಿಕೊಳ್ಳುವ ಕುರಿತು ಕೂಡಾ ಮಾಹಿತಿ ನೀಡಬೇಕು ಎಂದೂ ಸೂಚಿಸಿದರು.

ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್‌, ತೋಟಗಾರಿಕೆ ಹಾಗೂ ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.