ADVERTISEMENT

ಜಾತಿಗಣತಿ ವರದಿ ಜಾರಿ ಆಗಬಾರದು ಎಂಬುದು ಸರಿಯಲ್ಲ: ಜಿ. ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2023, 9:02 IST
Last Updated 17 ಡಿಸೆಂಬರ್ 2023, 9:02 IST
<div class="paragraphs"><p> ಗೃಹ ಸಚಿವ ಜಿ. ಪರಮೇಶ್ವರ </p></div>

ಗೃಹ ಸಚಿವ ಜಿ. ಪರಮೇಶ್ವರ

   

ಬೆಂಗಳೂರು: ‘ಜಾತಿ ಗಣತಿ ವರದಿಯ ಪರಿಣಾಮದ ಬಗ್ಗೆ ಸಲಹೆಗಳನ್ನು ನೀಡಲಿ. ಆದರೆ, ವರದಿ ಜಾರಿ ಆಗಬಾರದು ಎಂಬುದು ಸರಿಯಲ್ಲ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಸರ್ಕಾರ ತೀರ್ಮಾನ ಮಾಡಿ, ಜಾತಿಗಣತಿಗೆ ಹಣ ಖರ್ಚು ಮಾಡಿದೆ. ವರದಿಯ ಪರಿಣಾಮದ ಬಗ್ಗೆ, ಬೇರೆ ಬೇರೆ ತೀರ್ಮಾನಗಳ ಬಗ್ಗೆ ಪ್ರತಿಭಟಿಸಿ, ಸಲಹೆಗಳನ್ನು ನೀಡಲಿ. ಅದಕ್ಕೆ ತಕರಾರು ಏನು ಇಲ್ಲ.‌ ಆದರೆ, ವರದಿ ಜಾರಿ ಆಗಬಾರದು ಎನ್ನುವುದು ಸರಿಯಲ್ಲ’ ಎಂದರು.

ADVERTISEMENT

‘ಜನರನ್ನು ಮಲದ ಗುಂಡಿಗೆ ಇಳಿಸಿ, ಸ್ವಚ್ಛತೆ ಮಾಡಿಸುವುದನ್ನು ಈ ಹಿಂದೆ ದೇವರಾಜ ಅರಸು ಅವರ ಅವಧಿಯಲ್ಲಿ ಬಸವಲಿಂಗಪ್ಪನವರು ನಿಷೇಧಿಸಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಯಲುವನಹಳ್ಳಿಯ ಮೋರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಲದ ಗುಂಡಿ ಸ್ವಚ್ಛತೆಗೆ ಶಾಲಾ‌ ಮಕ್ಕಳನ್ನು ಬಳಸಿಕೊಂಡಿರುವುದು ಖಂಡನೀಯ. ಹಾಸ್ಟೆಲ್‌ನ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ಸೂಕ್ತ ಕಾನೂನು‌‌ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.