ಬೆಂಗಳೂರು: ರಾಜ್ಯ ಗುತ್ತಿಗೆದಾರರ ಸಂಘದ ಪ್ರಭಾರ ಅಧ್ಯಕ್ಷರಾಗಿ ಕಲಬುರಗಿಯ ಜಗನ್ನಾಥ ಜಿ. ಶೇಗ್ಜಿ ಆಯ್ಕೆಯಾಗಿದ್ದಾರೆ.
ಡಿ.ಕೆಂಪಣ್ಣ ಅವರು ‘ಸೆಪ್ಟೆಂಬರ್ 19ರಂದು ನಿಧನರಾಗಿದ್ದರಿಂದಾಗಿ, ಅಧ್ಯಕ್ಷ ಸ್ಥಾನ ತೆರವಾಗಿತ್ತು. ಅ.7ರ ಸೋಮವಾರದಂದು ನಡೆದ ರಾಜ್ಯ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಂಘದ ಹಿರಿಯ ಕಾರ್ಯಾಧ್ಯಕ್ಷರಾಗಿದ್ದ ಜಗನ್ನಾಥ್ ಅವರನ್ನು ಪ್ರಭಾರ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು’ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಎಂ. ರವೀಂದ್ರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.