ಬೆಂಗಳೂರು: ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿಗೆ ರೂಪಿಸಿರುವ ಕ್ರಿಯಾ ಯೋಜನೆ ಅನುಷ್ಠಾನಕ್ಕೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದರು.
ಬೆಂಗಳೂರಿನಲ್ಲಿ ಸೋಮವಾರ ನಡೆದ ಗಣಿ ಪರಿಸರ ಪುನರ್ ನಿರ್ಮಾಣ ನಿಗಮದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ವಿಜಯನಗರ, ಬಳ್ಳಾರಿ, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ಗಣಿ ಬಾಧಿತ ಪ್ರದೇಶಗಳ ಪುನರ್ ನಿರ್ಮಾಣ ಯೋಜನೆಗಳ ಅನುಷ್ಠಾನಕ್ಕೆ ರಾಜೀವ್ ಗಾಂಧಿ ವಸತಿ ನಿಗಮವನ್ನು ನೋಡಲ್ ಏಜೆನ್ಸಿಯಾಗಿ ನೇಮಿಸಲಾಗಿದೆ. ಹಾಗಾಗಿ, ಅಕ್ಟೋಬರ್‌ನಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಪ್ರವಾಸ ನಡೆಸಲಾಗುವುದು. ಅಷ್ಟರಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒಗಳು ಜಿಲ್ಲಾವಾರು ಪ್ರಸ್ತಾವ ಸಲ್ಲಿಸಬೇಕು. 2018ರವರೆಗೆ ₹23 ಸಾವಿರ ಕೋಟಿ ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿ ನಿಧಿ ಸಂಗ್ರಹವಾಗಿದೆ. 2023ರವರೆಗಿನ ಸಂಗ್ರಹದ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ರಾಜೀವ್ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕಿ ಸುಶೀಲಮ್ಮ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.