ADVERTISEMENT

ಜಂತಕಲ್‌ ಗಣಿ ಪ್ರಕರಣ: ವಿಚಾರಣೆ ಡಿ.11ಕ್ಕೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2024, 21:55 IST
Last Updated 20 ನವೆಂಬರ್ 2024, 21:55 IST
<div class="paragraphs"><p>ಸುಪ್ರೀಂ ಕೋರ್ಟ್‌</p></div>

ಸುಪ್ರೀಂ ಕೋರ್ಟ್‌

   

ನವದೆಹಲಿ: ಜಂತಕಲ್‌ ಗಣಿ ಸೇರಿದಂತೆ ಗಣಿ ಗುತ್ತಿಗೆಗಳ ಅಕ್ರಮ ಮಂಜೂರಾತಿ ಪ್ರಕರಣಗಳ ಸಂಬಂಧ ಸಲ್ಲಿಕೆಯಾಗಿರುವ ವಿಶೇಷ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಡಿಸೆಂಬರ್‌ 11ಕ್ಕೆ ಮುಂದೂಡಿದೆ. 

ನ್ಯಾಯಮೂರ್ತಿಗಳಾದ ಬೇಲಾ ಎಂ.ತ್ರಿವೇದಿ ಹಾಗೂ ಸತೀಶ್ ಚಂದ್ರ ಶರ್ಮಾ ಪೀಠವು ಅರ್ಜಿಯ ವಿಚಾರಣೆಯನ್ನು ಬುಧವಾರ ನಡೆಸಿತು. ಈ ವೇಳೆ, ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಪರ ವಕೀಲರು ಪ್ರತಿಕ್ರಿಯೆ ಸಲ್ಲಿಸಲು ಕಾಲಾವಕಾಶ ಕೇಳಿದರು. ಇದಕ್ಕೆ ಒಪ್ಪಿದ ಪೀಠವು ವಿಚಾರಣೆಯನ್ನು ಮುಂದೂಡಿತು. 

ADVERTISEMENT

ಮೆಸರ್ಸ್ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ ಗಣಿ ಗುತ್ತಿಗೆ ನೀಡಿಕೆ, ಜಂತಕಲ್ ಎಂಟರ್ ಪ್ರೈಸಸ್‌ನ ಗಣಿ ಗುತ್ತಿಗೆ ನವೀಕರಣದಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪ ಇದ್ದು, ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ತನಿಖೆ ಎದುರಿಸುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯ 11,797 ಚದರ ಕಿ.ಮೀ. ಅರಣ್ಯ ಭೂಮಿಯಲ್ಲಿ ಗಣಿಗಾರಿಕೆ ಅವಕಾಶ ನೀಡಿ ಎಚ್‌.ಡಿ. ಕುಮಾರಸ್ವಾಮಿ, ಎನ್.ಧರ್ಮಸಿಂಗ್ ಮತ್ತು ಅಧಿಕಾರಿಗಳು ರಾಜ್ಯದ ಬೊಕ್ಕಸಕ್ಕೆ ಭಾರೀ ನಷ್ಟ ಉಂಟು ಮಾಡಿದ್ದಾರೆಂದು ಅಂದಿನ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ತಮ್ಮ ವರದಿಯಲ್ಲಿ ಹೇಳಿದ್ದರು. ಈ ವರದಿಯನ್ನು ಆಧರಿಸಿ ಟಿ.ಜೆ.ಅಬ್ರಹಾಂ ಅವರು ದೂರು ಸಲ್ಲಿಸಿದ್ದರು. ಅರಣ್ಯ ಭೂಮಿಯಲ್ಲಿ ಗಣಿಗಾರಿಕೆ ಅವಕಾಶ ನೀಡಿದ ಕುರಿತು ಎಸ್.ಎಂ.ಕೃಷ್ಣ ವಿರುದ್ಧ ತನಿಖೆಗೆ ಆದೇಶಿಸಲಾಗಿತ್ತು. ತನಿಖೆಗೆ ಸುಪ್ರೀಂ ಕೋರ್ಟ್‌ 2012ರಲ್ಲಿ ತಡೆಯಾಜ್ಞೆ ನೀಡಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.