ADVERTISEMENT

ಪ್ರಜ್ವಲ್‌ ಕೇಸ್‌ಗೆ ವಿಶೇಷ ಪ್ರಾಸಿಕ್ಯೂಟರ್‌ ಆಗಿದ್ದ ಜಯನಾ ಕೊಠಾರಿ ರಾಜೀನಾಮೆ

ಗೃಹ ಇಲಾಖೆಯ ಉಪ ಕಾರ್ಯದರ್ಶಿಗೆ ಮಂಗಳವಾರ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ.

​ಪ್ರಜಾವಾಣಿ ವಾರ್ತೆ
Published 11 ಜೂನ್ 2024, 14:24 IST
Last Updated 11 ಜೂನ್ 2024, 14:24 IST
<div class="paragraphs"><p>ಜಯನಾ ಕೊಠಾರಿ</p></div>

ಜಯನಾ ಕೊಠಾರಿ

   

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ಅಪಹರಣ ಆರೋಪಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಹೆಚ್ಚುವರಿ ವಿಶೇಷ ಪ್ರಾಸಿಕ್ಯೂಟರ್‌ ಆಗಿ ನೇಮಕಗೊಂಡಿದ್ದ ಹಿರಿಯ ವಕೀಲೆ ಜಯನಾ ಕೊಠಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಕುರಿತಂತೆ ಅವರು ಗೃಹ ಇಲಾಖೆಯ ಉಪ ಕಾರ್ಯದರ್ಶಿಗೆ ಮಂಗಳವಾರ ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ADVERTISEMENT

ಪ್ರಕರಣವೇನು?

‘ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್‌.ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 364ಎ, 365 ಮತ್ತು 34 ಅಡಿ ಎಫ್‌ಐಆರ್‌ ದಾಖಲಿಸಲಾಗಿದೆ. ಇದರಲ್ಲಿ ಶಾಸಕ ಎಚ್‌.ಡಿ.ರೇವಣ್ಣ ಮೊದಲ ಆರೋಪಿಯಾಗಿದ್ದರೆ ಸತೀಶ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.