ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಾಸು ಪಡೆದಿರುವುದಾಗಿ ಪಕ್ಷೇತರ ಶಾಸಕರಾದ ಎಚ್. ನಾಗೇಶ್ ಮತ್ತು ಆರ್. ಶಂಕರ್ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಇಬ್ಬರು ಶಾಸಕರುಎಎನ್‌ಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ‘ನಾವು ದೋಸ್ತಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿರುವುದಾಗಿ‘ ಹೇಳಿದ್ದಾರೆ.
ರಾಜ್ಯ ಸರ್ಕಾರ ಅಭಿವೃದ್ದಿ ಮಾಡುವಲ್ಲಿ ವಿಫಲವಾಗಿದೆ. 7 ತಿಂಗಳು ನಾನು ಸಚಿವನಾಗಿದ್ದರೂಮುಖ್ಯಮಂತ್ರಿಗಳು ನನ್ನ ವಿಶ್ವಾಸಕ್ಕೆ ತೆಗೆದುಕೊಂಡಿರಲಿಲ್ಲ ಎಂದು ಶಾಸಕಆರ್. ಶಂಕರ್ ಹೇಳಿದ್ದಾರೆ.
ಕಳೆದ ಆರು ತಿಂಗಳಿಂದ ಮೈತ್ರಿ ಸರ್ಕಾರದ ಕಾರ್ಯವೈಖರಿ ತೃಪ್ತಿ ತಂದಿಲ್ಲ, ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರದಿಂದ ಅನುದಾನ ಸಿಕ್ಕಿಲ್ಲ ಈ ಹಿನ್ನೆಲೆಯಲ್ಲಿಜೆಡಿಎಸ್ ಮತ್ತು ಕಾಂಗ್ರೆಸ್ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಾಸ್ ಪಡೆದಿರುವುದಾಗಿಶಾಸಕ ಎಚ್. ನಾಗೇಶ್ ಹೇಳಿದ್ದಾರೆ.
ಈ ಇಬ್ಬರು ಶಾಸಕರು ಬಿಜೆಪಿ ಸೇರುವುದಾಗಿ ಪ್ರಕಟಿಸಿದ್ದಾರೆ.
ನಾಗೇಶ್ ಮುಳುಬಾಗಲು ಕ್ಷೇತ್ರದ ಶಾಸಕ.ಶಂಕರ್‌ರಾಣೆಬೆನ್ನೂರು ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.
ಈಗಾಗಲೇ ಈ ಇಬ್ಬರು ಶಾಸಕ ರಾಜ್ಯಪಾಲರ ಭೇಟಿಗೆ ಸಮಯ ಕೋರಿದ್ದಾರೆ. ರಾಜ್ಯಪಾಲರು ಸಮಯ ನೀಡಿದ ಕೂಡಲೇ ಅವರನ್ನು ಭೇಟಿ ಮಾಡಿ ಮೈತ್ರಿ ಸರ್ಕಾರಕ್ಕೆ ತಮ್ಮ ಬೆಂಬಲ ಇಲ್ಲ ಎಂಬ ಪತ್ರವನ್ನು ಸಲ್ಲಿಸಲಿದ್ದಾರೆ.
ನಾಗೇಶ್ ಮತ್ತು ಶಂಕರ್ ಮುಂಬೈನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.