ADVERTISEMENT

KRSಗೆ ಬಾಗಿನ ಕಾರ್ಯಕ್ರಮದಲ್ಲಿ ಸಂಪ್ರದಾಯ ಕಡೆಗಣಿಸಿ ಬಾಡೂಟ: ಜೆಡಿಎಸ್ ಆರೋಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಜುಲೈ 2024, 14:51 IST
Last Updated 29 ಜುಲೈ 2024, 14:51 IST
   

ಬೆಂಗಳೂರು: ಇಂದು ಕೆಆರ್‌ಎಸ್‌ಗೆ ಬಾಗಿನ ಅರ್ಪಿಸುವ ಕಾರ್ಯಕ್ರಮದಲ್ಲಿ ಸಂಪ್ರದಾಯ ಕಡೆಗಣಿಸಿ ಬಾಡೂಟ ಹಾಕಲಾಗಿದೆ ಎಂದು ಜೆಡಿಎಸ್ ಕಿಡಿಕಾರಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಮುಖ್ಯಮಂತ್ರಿಗಳೇ ಇದೆಂಥಾ ಅಪಚಾರ? ಎಂದು ಪ್ರಶ್ನಿಸಿದೆ.

ಬಾಗಿನ ಅರ್ಪಿಸಿ ಕಾಂಗ್ರೆಸ್ ಬಾಡೂಟ..! ತುತ್ತು ಅನ್ನಕ್ಕೂ ಸಂತ್ರಸ್ತರ ಪರದಾಟ..! ರಾಜ್ಯದಲ್ಲಿ ನೆರೆಯಿಂದ ಹಲವು ಜಿಲ್ಲೆಗಳಲ್ಲಿ ಜನರು ಒಂದು ತುತ್ತು ಅನ್ನಕ್ಕೂ ಪರಿತಪಿಸುತ್ತಿದ್ರೆ, ಇತ್ತ ಮಜಾವಾದಿ ಸಿದ್ದರಾಮಯ್ಯ, ಸಿದ್ದರಾಮಯ್ಯ ಸರ್ಕಾರ, ಮತ್ತವರ ಅಧಿಕಾರಿಗಳು ಭರ್ಜರಿ ಬಾಡೂಟ ತಿಂದು ಪಾರ್ಟಿ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ADVERTISEMENT

ಮಂಡ್ಯದಲ್ಲಿ ಕಾವೇರಿಗೆ ಬಾಗಿನ ಅರ್ಪಿಸಿದ ಬಳಿಕ ಬಾಡೂಟ ಆಯೋಜಿಸಿ ಸಂಪ್ರದಾಯಕ್ಕೆ ಎಳ್ಳುನೀರು ಬಿಟ್ಟು, ಅಪಚಾರ ಎಸಗಿ ಕಾಂಗ್ರೆಸ್ ಸರ್ಕಾರ ಜನರ ಆಕ್ರೋಶಕ್ಕೆ ಗುರಿಯಾಗಿದೆ. ಜನಸಾಮಾನ್ಯರ ಭಾವನೆಗಳಿಗೆ ಬೆಲೆ ಕೊಡದ ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುವುದು ಗ್ಯಾರಂಟಿ ಎಂದು ಎಚ್ಚರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.