ಬೆಂಗಳೂರು:ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಡಿರುವ ರಾಜೀನಾಮೆಯನ್ನು ಅಂಗೀಕರಿಸಿ ಎಂದು ಎಚ್.ವಿಶ್ವನಾಥ್ ಅವರುಮಾಧ್ಯಮಗಳ ಮೂಲಕವೇ ಜೆಡಿಎಸ್ ವರಿಷ್ಠರಿಗೆಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಕ್ಷದ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರೇ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವುದು ಸೂಕ್ತ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
‘ಜೆಡಿಎಸ್ ಕೋಟಾದಲ್ಲಿ ಖಾಲಿ ಇರುವ ಸಚಿವ ಸ್ಥಾನ ಭರ್ತಿ ಮಾಡಬೇಕು. ಸಚಿವರಾಗಿರುವಪಕ್ಷೇತರರಿಗೆ ಶೀಘ್ರವಾಗಿ ಖಾತೆ ಹಂಚಿಕೆ ಮಾಡಿ. ಅವರ ಸಮುದಾಯಕ್ಕೆ ನೋವುಂಟು ಮಾಡಬೇಡಿ’ ಎಂದು ಅವರು ಸಲಹೆ ನೀಡಿದರು.
‘ಒಬ್ಬ ನಾಯಕನನ್ನುರಾಜಕೀಯವಾಗಿ ಕೊಲ್ಲುವುದು ಒಳ್ಳೆಯದಲ್ಲ. ಮುಖ್ಯಮಂತ್ರಿ ಜತೆ ಕೆಲಸ ಮಾಡಬೇಕೆಂಬ ಆಸೆ ಇತ್ತು. ಆದರೆ ಸನ್ನಿವೇಶ ಅದಕ್ಕೆಆಸ್ಪದ ಕೊಟ್ಟಿಲ್ಲ. ನನ್ನ ಅನುಭವವನ್ನು ಮುಖ್ಯಮಂತ್ರಿಗಳಾಗಲಿ, ಸಿದ್ದರಾಮಯ್ಯನವರಾಗಲಿ ಬಳಸಿಕೊಂಡಿಲ್ಲ’ ಎಂದು ವಿಶ್ವನಾಥ್ ಅಳಲು ತೋಡಿಕೊಂಡರು.
ಹುಣಸೂರು ವಿಧಾನಸಭಾ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಚಿಂತನೆ ನಡೆಸುತ್ತಿದ್ದೇನೆ. ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷಸ್ಥಾನದ ರಾಜೀನಾಮೆ ಅಂಗೀಕರಿಸದಿದ್ದರೆ ಪಕ್ಷದ ಶಾಸಕತ್ವವೂ ಬೇಡ ಎಂದು ಅವರು ಹೇಳಿದ್ದಾರೆ. ಜತೆಗೆ,ಶಿಕ್ಷಣ ಇಲಾಖೆಯನ್ನು ನಿರ್ಲಕ್ಷಿಸುವ ಸರ್ಕಾರವನ್ನು ಜನತೆ ಕ್ಷಮಿಸುವುದಿಲ್ಲ ಎಂದೂ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.