ಬೆಂಗಳೂರು: ಬಿಜೆಪಿ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡುವ ಸಂಬಂಧ ಜೆಡಿಎಸ್‌ನ ಕೆಲವು ಶಾಸಕರು ಒಲವು ತೋರಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಕೆಲವು ಶಾಸಕರು ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡುವುದು ಸೂಕ್ತ ಎಂದು ಹೇಳಿದರು.
ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಹಿರಿಯ ಶಾಸಕ ಜಿ.ಟಿ.ದೇವೇಗೌಡ, ಸಭೆಯಲ್ಲಿ ಕೆಲವು ಶಾಸಕರು ಬಿಜೆಪಿಗೆ ಬೆಂಬಲ ನೀಡುವ ಪರ ಮಾತನಾಡಿದರೆ, ಇನ್ನು ಕೆಲವರು ಪ್ರತಿಪಕ್ಷದಲ್ಲಿ ಕುಳಿತು ಪಕ್ಷದ ಸಂಘಟನೆ ಮಾಡುವುದು ಸೂಕ್ತ ಎಂಬುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಎರಡೂ ವಿಷಯಗಳ ಬಗ್ಗೆ ಎಚ್.ಡಿ. ಕುಮಾರಸ್ವಾಮಿಯವರೇ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರು ತೆಗೆದುಕೊಳ್ಳುವ ತೀರ್ಮಾನವನ್ನು ಎಲ್ಲರೂ ಒಪ್ಪಿಕೊಳ್ಳುತ್ತೇವೆ ಎಂದು ಅವರು ತಿಳಿಸಿದರು.
ಶಾಸಕ ಸಾ.ರಾ.ಮಹೇಶ್ ಅವರು ಮಾಸತನಾಡಿ, ಪಕ್ಷ ಯಾವ ತೀರ್ಮಾನ ತೆಗೆದುಕೊಂಡರೂ ಒಮ್ಮತದ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.
* ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.