ADVERTISEMENT

ಆಗಸ್ಟ್‌ 20ರಂದು ನಂಜನಗೂಡಿನಿಂದ ಜೆಡಿಎಸ್‌ ಪಾದಯಾತ್ರೆ ಆರಂಭ

​ಪ್ರಜಾವಾಣಿ ವಾರ್ತೆ
Published 25 ಜೂನ್ 2019, 12:18 IST
Last Updated 25 ಜೂನ್ 2019, 12:18 IST
ವೈ.ಎಸ್‌.ವಿ.ದತ್ತ
ವೈ.ಎಸ್‌.ವಿ.ದತ್ತ   

ಬೆಂಗಳೂರು: ಜೆಡಿಎಸ್‌ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗಾಗಿ ದೇವರಾಜ ಅರಸು ಅವರ ಜನ್ಮದಿನವಾದ ಆಗಸ್ಟ್‌ 20ರಂದು ನಂಜನಗೂಡಿನಿಂದ ಮೊದಲ ಹಂತದ ಪಾದಯಾತ್ರೆ ಆರಂಭವಾಗಲಿದೆ ಎಂದು ಪಕ್ಷದ ಹಿರಿಯ ಮುಖಂಡ ವೈ.ಎಸ್‌.ವಿ.ದತ್ತ ಹೇಳಿದರು.

‘ಮೊದಲ ಹಂತದಲ್ಲಿ ಕಾವೇರಿಯಿಂದ ತುಂಗಭದ್ರಾವರೆಗೆ ಹಾಗೂ ಎರಡನೇ ಹಂತದಲ್ಲಿ ತುಂಗಭದ್ರಾದಿಂದ ಮಲಪ್ರಭಾದವರೆಗೆ ಪಾದಯಾತ್ರೆ ನಡೆಯಲಿದೆ. ಇದರ ಬಗ್ಗೆ ಸಮಾಲೋಚನೆ ನಡೆಸಲು ಜೂನ್‌ 29ರಂದು ಬೆಳಿಗ್ಗೆ 11ಕ್ಕೆ ನಗರದ ಮ್ಯಾರಿಯೆಟ್‌ಹೋಟೆಲ್‌ನಲ್ಲಿ ಸಭೆ ನಡೆಯಲಿದೆ’ ಎಂದು ಅವರು ಮಂಗಳವಾರ ಇಲ್ಲಿ ಪತ್ರಕರ್ತರಿಗೆ ತಿಳಿಸಿದರು.

‘ವಿಚಾರ, ವಿಕಾಸ ಮತ್ತು ವಿಶ್ವಾಸ ಎಂಬ ಮೂರು ಪರಿಕಲ್ಪನೆಯೊಂದಿಗೆ ಪಾದಯಾತ್ರೆ ನಡಯಲಿದೆ. ಪ್ರಾದೇಶಿಕ ಹಿತಾಸಕ್ತಿ ಕಾಪಾಡುವುದಕ್ಕೆ ಬಲಿಷ್ಠ ಪ್ರಾದೇಶಿಕ ಪಕ್ಷದ ಅಗತ್ಯ ಇದೆ ಎಂಬುದನ್ನು ಜನತೆಗೆ ಮನವರಿಕೆ ಮಾಡುವ ಪ್ರಯತ್ನ ಮಾಡಲಾಗುತ್ತದೆ. ಕರ್ನಾಟಕದ ಆಡಳಿತ ಕರ್ನಾಟಕದಿಂದಲೇ ಎಂಬುದನ್ನೂ ತಿಳಿಸುವ ಕೆಲಸ ಆಗಲಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.