ADVERTISEMENT

ಕುಮಾರ ತ್ಯಾಗ; ಯಾರಿಗೆ ಯೋಗ

​ಪ್ರಜಾವಾಣಿ ವಾರ್ತೆ
Published 21 ಜುಲೈ 2018, 19:13 IST
Last Updated 21 ಜುಲೈ 2018, 19:13 IST

ಬೆಂಗಳೂರು: ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ತ್ಯಜಿಸಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದು, ಈ ಹುದ್ದೆ ಯಾರಿಗೆ ಒಲಿಯಲಿದೆ ಎನ್ನುವ ಚರ್ಚೆ ಶುರುವಾಗಿದೆ.

ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಿದ್ಧತೆ ಕುರಿತು ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಸಮ್ಮುಖದಲ್ಲಿ ಶನಿವಾರ ನಡೆದ ಸಭೆಯಲ್ಲಿ ಪಕ್ಷದ ಮುಂದಿನ ಅಧ್ಯಕ್ಷರ ಆಯ್ಕೆ, ಸಂಘಟನೆಯ ಬಲವರ್ಧನೆ ಕುರಿತು ಸಮಾಲೋಚನೆ ನಡೆಯಿತು. ಬ್ರಾಹ್ಮಣರಾದ ದಿನೇಶ್ ಗುಂಡೂರಾವ್‌ ಕಾಂಗ್ರೆಸ್‌ಗೆ ಹಾಗೂ ಲಿಂಗಾಯತರಾದ ಬಿ.ಎಸ್‌. ಯಡಿಯೂರಪ್ಪ ಬಿಜೆಪಿಗೆ ಅಧ್ಯಕ್ಷರಾಗಿದ್ದಾರೆ. ಈ ಎರಡೂ ಸಮುದಾಯಗಳು ಜೆಡಿಎಸ್‌ ಬೆನ್ನಿಗೆ ನಿಂತಿರುವುದು ಕಡಿಮೆ. ಹೀಗಿರುವಾಗ ಹಿಂದು
ಳಿದ ಸಮುದಾಯಕ್ಕೆ ಸೇರಿದವರಿಗೆ ಅಧ್ಯಕ್ಷ ಸ್ಥಾನ ನೀಡಬೇಕು ಎನ್ನುವ ಸಲಹೆಗಳು ಬಂದಿವೆ.

ಈಡಿಗ ಸಮುದಾಯದ ಮಧು ಬಂಗಾರಪ್ಪ, ಕುರುಬ ಸಮುದಾಯದ ಎಚ್.ವಿಶ್ವನಾಥ್ ಹಾಗೂ ಮರಾಠ ಸಮುದಾಯದ ಪಿ.ಜಿ.ಆರ್. ಸಿಂಧ್ಯ ಅವರ ಹೆಸರು ಮುಂಚೂಣಿಯಲ್ಲಿದೆ.

ADVERTISEMENT

‘ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಆಗಬೇಕಿದೆ. ಅವರ ನೇಮಕಕ್ಕೆ ಸಮಿತಿ ರಚಿಸಲಾಗುತ್ತದೆ’ ಎಂದು ದೇವೇಗೌಡ ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.