ADVERTISEMENT

ಕೆಲವರಿಗೆ ಸಿದ್ದರಾಮಯ್ಯ ವಿರುದ್ಧ ಅಸೂಯೆ: ಆಂಜನೇಯ

​ಪ್ರಜಾವಾಣಿ ವಾರ್ತೆ
Published 14 ಜುಲೈ 2024, 15:53 IST
Last Updated 14 ಜುಲೈ 2024, 15:53 IST
ಎಚ್‌. ಆಂಜನೇಯ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಿ, ಅಭಿನಂದಿಸಿದರು. ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ, ಲೋಕಸಭೆಯ ಮಾಜಿ ಸ್ಪೀಕರ್ ಮೀರಾಕುಮಾರ್ ಇದ್ದರು
ಎಚ್‌. ಆಂಜನೇಯ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಿ, ಅಭಿನಂದಿಸಿದರು. ಆಹಾರ ಸಚಿವ ಕೆ.ಎಚ್‌. ಮುನಿಯಪ್ಪ, ಲೋಕಸಭೆಯ ಮಾಜಿ ಸ್ಪೀಕರ್ ಮೀರಾಕುಮಾರ್ ಇದ್ದರು   

ಬೆಂಗಳೂರು: ‘ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಐದು ವರ್ಷಗಳವರೆಗೆ ಕಾರ್ಯನಿರ್ವಹಿಸಬೇಕು. ಅವರು ಯಾವುದೇ ಟೀಕೆ–ಆರೋಪಗಳಿಗೆ ಎದೆಗುಂದಬೇಕಿಲ್ಲ. ಅವರ ಬೆಂಬಲಕ್ಕೆ ಇಡೀ ದಲಿತ ಸಮುದಾಯವೇ ಇರಲಿದೆ’ ಎಂದು ಕಾಂಗ್ರೆಸ್‌ ಮುಖಂಡ ಎಚ್‌.ಆಂಜನೇಯ ಅವರು ಹೇಳಿದರು.

ಬಾಬು ಜಗಜೀವನರಾಮ್‌ ಭವನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಅವರು, ‘ಈ ಭವನ ನಿರ್ಮಾಣದಲ್ಲಿ, ಸಮಾಜ ಕಲ್ಯಾಣ ಇಲಾಖೆ ನಿರ್ವಹಣೆಯಲ್ಲಿ ಸಿದ್ದರಾಮಯ್ಯ ನನಗೆ ಬೆಂಬಲವಾಗಿ ನಿಂತಿದ್ದರು’ ಎಂದು ನೆನಪಿಸಿಕೊಂಡರು.

‘ನೊಂದವರು, ಬಡವರು, ಶೋಷಿತರು, ಅಹಿಂದ ವರ್ಗದ ಪ್ರಗತಿಗೆ ಯೋಜನೆಗಳನ್ನು ರೂಪಿಸಿರುವ ಕಾರಣಕ್ಕೆ ಅವರ ಕುರಿತು ಅಸೂಯೆ ಉಂಟಾಗಿದೆ. ಇದೇ ಕಾರಣಕ್ಕೆ ಕೆಲವರು ಅವರ ವಿರುದ್ಧ ಸುಳ್ಳು ಆರೋಪಗಳಲ್ಲಿ ತೊಡಗಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಆಂಜನೇಯ ಸಚಿವರಾಗಿದ್ದ ಕಾಲದಲ್ಲಿ ಈ ಭವನದ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದರು. ಈಗ ಭವ್ಯ ಭವನ ಎದ್ದುನಿಂತಿದೆ ಎಂದರು. ದಲಿತ ಸಂಘಟನೆಗಳು ಆಂಜನೇಯ ಅವರಿಗೆ ಬೆಳ್ಳಿಗದೆ ನೀಡಿ ಗೌರವಿಸಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.