ಬೆಂಗಳೂರು: ಜಿಂದಾಲ್ ಕಂಪನಿಗೆ 3,367 ಎಕರೆ ಜಮೀನು ಮಾರಾಟ ಮಾಡಲು ಗೃಹ ಸಚಿವ ಎಂ.ಬಿ.ಪಾಟೀಲ ಅವರ ಅಧ್ಯಕ್ಷತೆಯ ಸಂಪುಟ ಉಪಸಮಿತಿ ಒಪ್ಪಿಗೆ ನೀಡಿದೆ.
ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರ ಪತನದ ಅಂಚಿಗೆ ತಲುಪಿರುವ ಬೆನ್ನಲೇ ತರಾತುರಿಯಲ್ಲಿ ಈ ನಿರ್ಣಯ ತೆಗೆದುಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ. ಜಿಂದಾಲ್‌ಗೆ ಭೂಮಿ ಮಾರಾಟ ಮಾಡುವ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಹಲವರಿಂದ ವಿರೋಧ ವ್ಯಕ್ತವಾಗಿತ್ತು. ಬಿಜೆಪಿಯೂ ಈ ನಿರ್ಧಾರದ ವಿರುದ್ಧ ಹೋರಾಟ ನಡೆಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.