ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 11ನೇ ಆರೋಪಿ ಎನ್.ಮೋಹನ್ ನಾಯಕ್ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಈ ಕುರಿತಂತೆ ಮೋಹನ್ ನಾಯಕ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ (ಡಿ.7) ಪುರಸ್ಕರಿಸಿದೆ.
'₹ 1 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್ ಹಾಗೂ ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ಪ್ರತಿ ವಿಚಾರಣೆಗೂ ನ್ಯಾಯಾಲಯಕ್ಕೆ ಹಾಜರಾಗಬೇಕು. ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ಇಂಥದ್ದೇ ಪ್ರಕರಣದಲ್ಲಿ ಭಾಗಿಯಾಗುವಂತಿಲ್ಲ' ಎಂಬ ಷರತ್ತುಗಳನ್ನು ನ್ಯಾಯಪೀಠ ವಿಧಿಸಿದೆ.
ಈ ಪ್ರಕರಣದಲ್ಲಿ ಮೋಹನ್ ನಾಯಕ್ ಜಾಮೀನು ಪಡೆದ ಮೊದಲ ಆರೋಪಿ ಎನಿಸಿದ್ದಾರೆ. ಮೋಹನ್ ನಾಯಕ್ ಪರ ಹೈಕೋರ್ಟ್ ವಕೀಲ ಅಮರ್ ಕೊರಿಯಾ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.