ಬೆಂಗಳೂರು: ಕರ್ನಾಟಕ ಗಡಿ ಮತ್ತು ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಅವರನ್ನು ನೇಮಕ ಮಾಡಲಾಗಿದೆ.
ಈ ಹಿಂದೆ ಆಯೋಗದ ಅಧ್ಯಕ್ಷರಾಗಿದ್ದ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರು ನಿಧನರಾದ ಬಳಿಕ, 10 ತಿಂಗಳಿನಿಂದಈ ಹುದ್ದೆ ಖಾಲಿ ಇತ್ತು. 2018ರ ಪೂರ್ವದಲ್ಲಿ ಮಹಾರಾಷ್ಟ್ರ–ಕರ್ನಾಟಕ ಗಡಿ ವ್ಯಾಜ್ಯದ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಲು ಗಡಿ ಆಯೋಗವೊಂದನ್ನು ರಚಿಸಲಾಗಿತ್ತು. ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಈ ಆಯೋಗಕ್ಕೆ ಜಲವ್ಯಾಜ್ಯಗಳ ವ್ಯಾಪ್ತಿಯನ್ನು ನೀಡಿ, ಗಡಿ ಮತ್ತು ನದಿಗಳ ರಕ್ಷಣಾ ಆಯೋಗ ಎಂದು ಪುನರ್ ರಚನೆ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.