ADVERTISEMENT

ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ. ಮರೀಗೌಡ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2024, 7:51 IST
Last Updated 16 ಅಕ್ಟೋಬರ್ 2024, 7:51 IST
<div class="paragraphs"><p>ಕೆ. ಮರೀಗೌಡ</p></div>

ಕೆ. ಮರೀಗೌಡ

   

ಬೆಂಗಳೂರು: ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ಅವರು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ದೀಪ ಚೋಳನ್ ಅವರಿಗೆ ರಾಜೀನಾಮೆ ಸಲ್ಲಿಸಿದರು.

ವಿಕಾಸಸೌಧದಲ್ಲಿರುವ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಕಚೇರಿಗೆ ಬುಧವಾರ ಹಾಜರಾಗಿ ರಾಜೀನಾಮೆ ಸಲ್ಲಿಸಿದರು.

ADVERTISEMENT

ರಾಜೀನಾಮೆ ಬಳಿಕ ಮರೀಗೌಡ ಸುದ್ದಿಗಾರರಿಗೆ ಹೇಳಿದ್ದಿಷ್ಟು

‘ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ರಾಜೀನಾಮೆ ಕೊಟ್ಟಿದ್ದೇನೆ. ಸಿಎಂ ಅವರು ರಾಜೀನಾಮೆ ನೀಡಲು ಸೂಚನೆ ಕೊಟ್ಟಿದ್ರು ಅದಕ್ಕೆ ರಾಜೀನಾಮೆ ಕೊಟ್ಟಿದ್ದೇನೆ‌. ನನ್ನ ಆರೋಗ್ಯವು ಸರಿಯಿಲ್ಲ. ಹೀಗಾಗಿ ರಾಜೀನಾಮೆ ಕೊಟ್ಟಿದ್ದೇನೆ‘

‘ಮುಡಾ ತನಿಖೆ ನಡೆಯುತ್ತಿದೆ. ತನಿಖೆ ನಡೆಯಲಿ. ಅಕ್ರಮ ಆಗಿದೆಯಾ ಇಲ್ಲ ಅಂತ ನಾನು ಹೇಳೊಲ್ಲ. ಈಗ ತನಿಖೆ ನಡೆಯುತ್ತಿದೆ. ತನಿಖೆಯಿಂದ ಸತ್ಯ ಹೊರಬರುತ್ತೆ‌. ನನ್ನ ಮೇಲೆ ಯಾವುದೇ ಒತ್ತಡ ಇಲ್ಲ. ಆರೋಗ್ಯ ಸರಿಯಿಲ್ಲದ ಕಾರಣ ರಾಜೀನಾಮೆ ಕೊಟ್ಟಿದ್ದೇನೆ ಅಷ್ಟೆ‌. ಸೈಟ್ ವಿಚಾರವಾಗಿ ಸಿಎಂ ಅವರು ಯಾವುದೇ ಒತ್ತಡ ನನ್ನ ಮೇಲೆ ಹಾಕಿಲ್ಲ’

‘ಸಿದ್ದರಾಮಯ್ಯ ನಮ್ಮ ನಾಯಕರು. 40 ವರ್ಷಗಳಿಂದ ಜೊತೆಯಲ್ಲಿ ಇದ್ದೇನೆ. ತಾಲೂಕು, ಜಿಲ್ಲಾ ಪಂಚಾಯತ ಅಧ್ಯಕ್ಷರಾಗಿ ಮಾಡಿದ್ರು ನನ್ನನ್ನ. ಯಾವತ್ತು ಕೂಡಾ ಸಿದ್ದರಾಮಯ್ಯ ಅವರು ಅಕ್ರಮ ಮಾಡಿ ಅಂತ ಹೇಳಿಲ್ಲ. ಮುಡಾ ವಿಚಾರದಲ್ಲೂ ಸಿಎಂ ಒತ್ತಡ ಹಾಕಿಲ್ಲ’

‘ಎರಡು ಬಾರಿ ಸ್ಟ್ರೋಕ್ ಆಯ್ತು. ಆರೋಗ್ಯ ಸರಿಯಿಲ್ಲ. ಹೀಗಾಗಿ ಮುಡಾ ಅಧ್ಯಕ್ಷರಾಗಿ ಮುಂದುವರೆಯಲು ಆಗೊಲ್ಲ ಅಂತ ರಾಜೀನಾಮೆ ಕೊಟ್ಟಿದ್ದೇನೆ. ಇಲಾಖೆ ಸಚಿವರು ರಾಜೀನಾಮೆಗೆ ಒತ್ತಡ ಮಾಡಿದ್ರು ಅನ್ನೋದು ಸತ್ಯಕ್ಕೆ ದೂರವಾದ ಮಾತು’

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.