ADVERTISEMENT

ಸಿ.ಎಂಗೆ ಕಾಗಿನೆಲೆ ಶ್ರೀ, ಈಶ್ವರಪ್ಪ ಅಭಿನಂದನೆ

ಸಂಗೊಳ್ಳಿ ರಾಯಣ್ಣ ಸ್ಮರಣೆಗೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2021, 19:31 IST
Last Updated 14 ಆಗಸ್ಟ್ 2021, 19:31 IST
ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಬೆಂಗಳೂರಿನ ಶಾಖಾ ಮಠಕ್ಕೆ ಶನಿವಾರ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರಂಜನಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಉಪಸ್ಥಿತರಿದ್ದರು.
ಕಾಗಿನೆಲೆ ಮಹಾಸಂಸ್ಥಾನದ ಕನಕ ಗುರುಪೀಠದ ಬೆಂಗಳೂರಿನ ಶಾಖಾ ಮಠಕ್ಕೆ ಶನಿವಾರ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿರಂಜನಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಉಪಸ್ಥಿತರಿದ್ದರು.   

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನ ಮತ್ತು ಹುತಾತ್ಮರಾದ ದಿನಗಳಂದು ಸರ್ಕಾರಿ ಕಾರ್ಯಕ್ರಮಗಳನ್ನು ನಡೆಸುವಂತೆ ಆದೇಶ ಹೊರಡಿಸಿರುವುದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಸ್ವಾಮೀಜಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌. ಈಶ್ವರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

ಸಂಗೊಳ್ಳಿ ರಾಯಣ್ಣನ ಜನ್ಮದಿನವಾದ ಆಗಸ್ಟ್‌ 15 ಮತ್ತು ಅವರು ಹುತಾತ್ಮರಾದ ದಿನವಾದ ಜನವರಿ 26ರಂದು ರಾಜ್ಯ ರಾಜಧಾನಿ, ಎಲ್ಲ ಜಿಲ್ಲಾ ಕೇಂದ್ರಗಳು ಮತ್ತು ತಾಲ್ಲೂಕು ಮಟ್ಟದಲ್ಲಿ ಸರ್ಕಾರಿ ಕಾರ್ಯಕ್ರಮ ನಡೆಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶುಕ್ರವಾರ ಆದೇಶ ಹೊರಡಿಸಿತ್ತು.

ಕಾಗಿನೆಲೆ ಕನಕ ಗುರುಪೀಠದ ಬೆಂಗಳೂರು ಶಾಖಾ ಮಠಕ್ಕೆ ಶನಿವಾರ ಭೇಟಿನೀಡಿದ ಬಸವರಾಜ ಬೊಮ್ಮಾಯಿ ಅವರು ನಿರಂಜನಾನಂದ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು. ಸಂಗೊಳ್ಳಿ ರಾಯಣ್ಣ ಸ್ಮರಣೆಗೆ ಕಾರ್ಯಕ್ರಮಗಳನ್ನು ನಡೆಸುವಂತೆ ಆದೇಶ ಹೊರಡಿಸಿರುವುದಕ್ಕಾಗಿ ಸ್ವಾಮೀಜಿ ಮತ್ತು ಸಚಿವ ಈಶ್ವರಪ್ಪ ಅವರು ಮುಖ್ಯಮಂತ್ರಿಯವರನ್ನು ಅಭಿನಂದಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.