ADVERTISEMENT

ಮೈತ್ರಿ ನಿರೀಕ್ಷೆ, ಕಾಂಗ್ರೆಸ್‌ ಅಭ್ಯರ್ಥಿ ಕಿಮ್ಮನೆ: ಕಾಗೋಡು

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2018, 17:05 IST
Last Updated 8 ಅಕ್ಟೋಬರ್ 2018, 17:05 IST

ಶಿವಮೊಗ್ಗ: ಜೆಡಿಎಸ್‌ ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಟ್ಟರೆ ಈ ಉಪಚುನಾವಣೆಯಲ್ಲಿ ಕಿಮ್ಮನೆ ರತ್ನಾಕರ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆಎಂದು ಮಾಜಿ ಸಚಿವಕಾಗೋಡು ತಿಮ್ಮಪ್ಪ ಸುಳಿವು ನೀಡಿದರು.

ಇಲ್ಲಿನ ಬಾಲರಾಜ್ ಅರಸ್ ರಸ್ತೆಯ ಕ್ಲಾರ್ಕ್ ಇನ್ ಹೋಟೆಲ್‌ನಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಮುಖಂಡರ ಸಭೆಯ ನಂತರ ಮಾತನಾಡಿದ ಅವರು, ಅಂತಿಮ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದರು.

ಬಿಜೆಪಿ ಕುತಂತ್ರ; ಕಿಮ್ಮನೆ ಆರೋಪ: ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೇಲೆ ಒತ್ತಡ ತಂದು ಉಪ ಚುನಾವಣೆ ನಡೆಸುತ್ತಿದೆ. ಸಾರ್ವತ್ರಿಕ ಚುನಾವಣೆಯ ಹೊಸ್ತಿಲಲ್ಲಿ ಉಪ ಚುನಾವಣೆ ಅಗತ್ಯ ಇರಲಿಲ್ಲ. ಅವಧಿ ಕಡಿಮೆ ಇದೆ. ಈ ವಿಷಯ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೂ ಗೊತ್ತಿದೆ. ಆದರೂ ನಾಟಕ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ADVERTISEMENT

ಉಪಚುನಾವಣೆ ನಡೆದರೆ ಎಲ್ಲರ ಶ್ರಮವೂ ವ್ಯರ್ಥ. ಇಲ್ಲಿ ಚುನಾವಣೆ ನಡೆಸುವ ಆಯೋಗತೆಲಂಗಾಣದಲ್ಲಿ ಏಕೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.