ಬೆಂಗಳೂರು: ‘ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್ ನಾಲ್ಕು ಸ್ಥಾನ ಗಳಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ಸಹಕಾರ ನೀಡುವಂತೆ ರಾಜ್ಯಸಭೆಯ ವಿರೋದ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಳಿದ್ದಾರೆ. ನನ್ನ ಮತ್ತು ಎಚ್. ಡಿ. ಕುಮಾರಸ್ವಾಮಿ ಜತೆ ಅವರು ಮಾತನಾಡಿದ್ದಾರೆ’ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ತಿಳಿಸಿದರು.
ಬಿಜೆಪಿಗೆ ಸಹಕಾರ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕುಮಾರಸ್ವಾಮಿ ಜತೆ ಮಾತನಾಡಿರುವ ಸಾಧ್ಯತೆ ಇದೆ. ಸ್ಥಳೀಯ ಮುಖಂಡರ ಅಭಿಪ್ರಾಯ ಕೇಳದೆ ನಿರ್ಧಾರ ಕೈಗೊಳ್ಳದಂತೆ ಕುಮಾರಸ್ವಾಮಿ ಅವರಿಗೆ ಸೂಚನೆ ನೀಡಲಾಗಿದೆ ಎಂದರು.
'ಖರ್ಗೆ ಅವರು ಅವರ ಪಕ್ಷದವರನ್ನು ಸಂಪರ್ಕಿಸಿ ಮಾತನಾಡಿದ್ದಾರೆ ಅನಿಸುತ್ತದೆ. ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಕುಳಿತು ಮಾತನಾಡಲಿ ಆಮೇಲೆ ನೋಡೋಣ' ಎಂದರು.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಿಂದ ನಿರಾಶರಾಗಬೇಕಿಲ್ಲ. ಜೆಡಿಎಸ್ ಸದಸ್ಯತ್ವ ನೋಂದಣಿಗೆ ಆದ್ಯತೆ ನೀಡಲಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.