ಬೆಂಗಳೂರು: ಶ್ರೀ ಸಂತ ಕನಕದಾಸ ಜಯಂತಿ ಪ್ರಯುಕ್ತ ನೀಡಲಾಗುವ 2024ನೇ ಸಾಲಿನ ಪ್ರತಿಷ್ಠಿತ ಕನಕಶ್ರೀ ಪ್ರಶಸ್ತಿ ಗೆ ಬಳ್ಳಾರಿಯ ವ್ಯಾಸನಕೆರೆ ಪ್ರಭಂಜನಾಚಾರ್ಯ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಸೋಮವಾರ ನವೆಂಬರ್ 18ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿರುವ ಕನಕದಾಸ ಜಯಂತಿ ಸಮಾರಂಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಪ್ರಶಸ್ತಿಯು ₹5 ಲಕ್ಷ ನಗದು, ಕನಕದಾಸರ ಪುತ್ಥಳಿ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.