ಬೆಂಗಳೂರು: 'ಕಾಂಗ್ರೆಸ್ ಇಲ್ಲದೇ ದೇಶ ಉಳಿಯಲು ಸಾಧ್ಯವಿಲ್ಲ' ಎಂದ ಕನ್ಹಯ್ಯ ಕುಮಾರ್ ಹೇಳಿಕೆಗೆ ಸಾಮಾಜಿಕ ಹೋರಾಟಗಾರ, ನಟ ಚೇತನ್ ಕುಮಾರ್ ಅಹಿಂಸಾ ಪ್ರತಿಕ್ರಿಯಿಸಿದ್ದು, ಇದು ಅಸತ್ಯ ಮತ್ತು ಭಟ್ಟಂಗಿತನ ಎಂದಿದ್ದಾರೆ.
ವೈಯಕ್ತಿಕ ಅಧಿಕಾರದ ಸಲುವಾಗಿ, ಕನ್ಹಯ್ಯ ಕುಮಾರ್ ಅವರು ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದ್ದಾರೆ ಎಂದು ಚೇತನ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಚೇತನ್ ಕುಮಾರ್, ಹೊಸದಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾದ ಕನ್ಹಯ್ಯ ಕುಮಾರ್ ಅವರು 'ಕಾಂಗ್ರೆಸ್ ಇಲ್ಲದೇ ದೇಶ ಉಳಿಯಲು ಸಾಧ್ಯವಿಲ್ಲ' ಎಂಬ ಹೇಳಿಕೆಯನ್ನು ನೀಡಿದ್ದಾರೆ. ಇದು ಅಸತ್ಯ ಮತ್ತು ಭಟ್ಟಂಗಿತನ. ಕಾಂಗ್ರೆಸ್ ಮತ್ತು ಬಿಜೆಪಿಯ ಅವಕಾಶವಾದ ಮತ್ತು ಬೂಟಾಟಿಕೆಗಳಿಲ್ಲದೆಯೇ ಕರ್ನಾಟಕ ಮತ್ತು ಭಾರತವು ಉತ್ತಮವಾಗಿರುತ್ತದೆ ಎಂದಿದ್ದಾರೆ.
ಯುವ ನಾಯಕ ಕನ್ಹಯ್ಯ ಕುಮಾರ್ ಮಂಗಳವಾರ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಗುಜರಾತ್‌ನ ಪಕ್ಷೇತರ ಶಾಸಕ ಜಿಗ್ನೇಶ್ ಮೆವಾನಿ ಜೊತೆಗೆ ಕಾಂಗ್ರೆಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದ ಕನ್ಹಯ್ಯ ಪಕ್ಷ ಸೇರ್ಪಡೆಗೊಂಡರು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಚಿಹ್ನೆಯ ಅಡಿಯಲ್ಲಿ ಸ್ಪರ್ಧಿಸುವುದಾಗಿ ಜಿಗ್ನೇಶ್ ಮೆವಾನಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.