ADVERTISEMENT

ಎಂಇಎಸ್‌ ನಿಷೇಧಕ್ಕೆ 29ರವರೆಗೆ ಗಡುವು: 31ಕ್ಕೆ ಕರ್ನಾಟಕ ಬಂದ್‌ಗೆ ಕರೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2021, 19:45 IST
Last Updated 22 ಡಿಸೆಂಬರ್ 2021, 19:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ನಿಷೇಧಿಸಬೇಕೆಂದು ಒತ್ತಾಯಿಸಿ ಡಿ.31ರಂದು ಕರ್ನಾಟಕ ಬಂದ್‌ಗೆ ವಿವಿಧ ಕನ್ನಡ ಸಂಘಟನೆಗಳು ಕರೆ ನೀಡಿವೆ.

ಎಂಇಎಸ್ ನಿಷೇಧಿಸುವ ಬಗ್ಗೆ ಡಿ.29ರ ಒಳಗೆ ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳಬೇಕು. ಈ ಗಡುವಿ ನೊಳಗೆ ನಿಷೇಧಿಸದಿದ್ದರೆ ಬಂದ್ ಖಚಿತ ಎಂದು ಈ ಸಂಘಟನೆಗಳು ತಿಳಿಸಿವೆ.

ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಅಖಿಲ ಕರ್ನಾಟಕ ಡಾ. ರಾಜ್‌ಕುಮಾರ್ ಅಭಿ ಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್‌ಕುಮಾರ್‌ ಶೆಟ್ಟಿ, ಕನ್ನಡ ಸೇನೆಯ ಕೆ.ಆರ್‌.ಕುಮಾರ್‌ ಸೇರಿ ವಿವಿಧ ಸಂಘಟನೆಗಳ ಮುಖಂಡರು ಬುಧವಾರದ ಸಭೆಯಲ್ಲಿ ಬಂದ್‌ಗೆ ಕರೆ ನೀಡುವ ತೀರ್ಮಾನ ಕೈಗೊಂಡಿದ್ದಾರೆ.

ADVERTISEMENT

‘ಕನ್ನಡಿಗರ ಶಕ್ತಿ ಪ್ರದರ್ಶಿಸಬೇಕಾಗಿದೆ. ಪಕ್ಷಾತೀತವಾಗಿ ಎಲ್ಲರೂ ಬೆಂಬಲಿಸಬೇಕು. ಬಂದ್‌ ಶಕ್ತಿಯನ್ನು ಕುಂದಿಸುವ ಪ್ರಯತ್ನಕ್ಕೆ ಯಾರೂ ಕೈಹಾಕ ಬಾರದು’ ಎಂದು ವಾಟಾಳ್‌ ನಾಗರಾಜ್‌ ಕೋರಿದರು. ‘ಎಂಇಎಸ್‌ ನಿಷೇಧಿಸಲು ಸಿ.ಎಂ ಕಠಿಣ ನಿರ್ಧಾರ ಕೈಗೊಳ್ಳಬೇಕು. ಡಿ.29ರವರೆಗೆ ಅವಕಾಶ ನೀಡುತ್ತೇವೆ’ ಎಂದು ಹೇಳಿದರು.

‘ಬಂದ್‌ಗೆ 35ಕ್ಕೂ ಹೆಚ್ಚು ಸಂಘಟ ನೆಗಳು ಬೆಂಬಲ ಸೂಚಿಸಿವೆ. ಚಲನಚಿತ್ರ ನಟರೂ ಬೆಂಬಲ ಸೂಚಿಸಿದ್ದಾರೆ’ ಎಂದು ಸಾ.ರಾ. ಗೋವಿಂದು ತಿಳಿಸಿದರು.

ಓಲಾ, ಉಬರ್‌ ಚಾಲಕರ ಸಂಘ, ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಬಂದ್‌ಗೆ ಬೆಂಬಲ ಸೂಚಿಸಿದೆ.

**
ಹೋರಾಟಕ್ಕೆ ಬೆಂಬಲ, ಬಂದ್‌ಗೆ ಇಲ್ಲ: ಪಿ.ಸಿ.ರಾವ್‌
‘ಕನ್ನಡ ಪರ ಹೋರಾಟಕ್ಕೆ ನಾವು ಸಂಪೂರ್ಣ ಬೆಂಬಲ ಕೊಡುತ್ತೇವೆ. ಆದರೆ, ಡಿ.31ರ ಕರ್ನಾಟಕ ಬಂದ್‌ಗೆ ಬೆಂಬಲ ನೀಡುವುದಿಲ್ಲ. ಮುಂದಿನ ದಿನಗಳಲ್ಲಿಯೂ ಯಾವುದೇ ಬಂದ್‌ ಬೆಂಬಲಿಸುವುದಿಲ್ಲ’ ಎಂದು ಬೃಹತ್‌ ಬೆಂಗಳೂರು ಹೋಟೆಲ್‌ಗಳ ಸಂಘದ ಅಧ್ಯಕ್ಷ ಪಿ.ಸಿ.ರಾವ್‌ ತಿಳಿಸಿದ್ದಾರೆ.

ಬಂದ್‌ ಪರಿಹಾರವಲ್ಲ: ಟಿ.ಎ. ನಾರಾಯಣಗೌಡ
‘ಬಂದ್‌ ಎಲ್ಲ ಸಮಸ್ಯೆಗಳಿಗೂ ಪರಿಹಾರವಲ್ಲ. ನಮ್ಮ ಸಂಘಟನೆ ಮೊದಲಿನಿಂದಲೂ ದಿಢೀರ್ ಬಂದ್ ಕರೆಗಳಿಂದ ದೂರ ಉಳಿಯುತ್ತ ಬಂದಿದೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ತಿಳಿಸಿದ್ದಾರೆ.

‘ಬಂದ್ ಒಂದೇ ಚಳವಳಿ ಮಾರ್ಗವಲ್ಲ. ಅದು ಕೊನೆಯ ಅಸ್ತ್ರವಾಗಬೇಕು’ ಎಂದು ಟ್ವೀಟ್‌ ಮಾಡಿದ್ದಾರೆ.

ಮಹಾರಾಷ್ಟ್ರಕ್ಕೆ ಬಸ್ ಸಂಚಾರ ಸ್ಥಗಿತ
ಕಲಬುರಗಿ: ಮಹಾರಾಷ್ಟ್ರದಲ್ಲಿ ರಾಜ್ಯದ ಸಾರಿಗೆ ಸಂಸ್ಥೆಯ ಬಸ್‌ ಗಳನ್ನು ತಡೆದು ಮಸಿ ಹಚ್ಚಿದ ಘಟನೆಗಳು ನಡೆದಿರುವು ದ ರಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಮಹಾರಾಷ್ಟ್ರಕ್ಕೆ ಬಸ್‌ ಸಂಚಾರ ಸ್ಥಗಿತಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.